ಸಾಗರದ ಕಾಸ್ಪಾಡಿ ಬಳಿ ಕಾರು ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ

ಸಾಗರದ ಕಾಸ್ಪಾಡಿ ಬಳಿ ಮಣಿಪಾಲದಿಂದ ಬರುತ್ತಿದ್ದ ಬಸ್ ಹಾಗೂ ದಾವಣಗೆರೆಗೆ ತೆರಳುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ

ಹಂಚಿಕೊಳ್ಳಿ
WhatsApp Facebook X Telegram
ಸಾಗರದ ಕಾಸ್ಪಾಡಿ ಬಳಿ ಕಾರು ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ
ಸುದ್ದಿ ಸಾರಾಂಶ

ಸಾಗರದ ಕಾಸ್ಪಾಡಿ ಬಳಿ ಮಣಿಪಾಲದಿಂದ ಬರುತ್ತಿದ್ದ ಬಸ್ ಹಾಗೂ ದಾವಣಗೆರೆಗೆ ತೆರಳುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ

ಶಿವಮೊಗ್ಗ :​ಡಿಸೆಂಬರ್ 28, 2025, ಸಾಗರ ತಾಲ್ಲೂಕಿನ ಕಾಸ್ಪಾಡಿ ಸಮೀಪ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.  ಘಟನೆಯಲ್ಲಿ ಕಾರಿನಲ್ಲಿದ್ದ ದಂಪತಿಗಳ ತಲೆಗೆ  ಪೆಟ್ಟಾಗಿದ್ದು, ಕಾರಿನಲ್ಲಿದ್ದ ಮಕ್ಕಳು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

​ಅಪಘಾತಕ್ಕೀಡಾದ ಖಾಸಗಿ ಬಸ್ ಮಣಿಪಾಲದಿಂದ ಸಾಗರದ ಕಡೆಗೆ ಬರುತ್ತಿತ್ತು. ಇದೇ ಸಮಯದಲ್ಲಿ ಸಾಗರದಿಂದ ದಾವಣಗೆರೆಗೆ ತೆರಳುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ಸಮಯದಲ್ಲಿ ಬಸ್ಸಿನಲ್ಲಿ ಕಡಿಮೆ ಸಂಖ್ಯೆಯ ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ.

Malenadu Today Shivamogga

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel  instagram youtube telegram  google business   malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor