ಹುಲಿಕಲ್, ಬಸ್ ಅಪಘಾತ ಮಗು ಸಾವು. ಮೂವರಿಗೆ ಗಂಭೀರ ಗಾಯ

ಹೊಸನಗರ ತಾಲೂಕಿನ ಹುಲಿಕಲ್ ಘಾಟಿಯಲ್ಲಿ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಗುವೊಂದು ದುರ್ಮರಣಕ್ಕೀಡಾಗಿದೆ.

Private Bus accident in hulikal ghat 
Bus accident in hulikal ghat

ಶಿವಮೊಗ್ಗ: ನಾಳೆ ಆರ್.ಎಂ.ಎಲ್. ನಗರದ ಹಲವೆಡೆ ವಿದ್ಯುತ್ ವ್ಯತ್ಯಯ 

ದಾವಣಗೆರೆಯಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ದುರ್ಗಾಂಬ ಸಂಸ್ಥೆಯ ಖಾಸಗಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಡ್ಡಕ್ಕೆ ಅಪ್ಪಳಿಸಿದೇ. ಇದರ ಪರಿಣಾಮ ಘಟನೆಯಲ್ಲಿ ಶರೀಫಾ ಬಿ (57), ಇಮಾಮ್ ಸಾಬ್ (73) ಮತ್ತು ಸಫಾನ (28) ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ರಭಸಕ್ಕೆ ಬಸ್ಸಿನ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಸ್ಥಳಕ್ಕೆ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Private Bus accident in hulikal ghat