Bhadra kada Meeting Scheduled for Jan 2 ಶಿವಮೊಗ್ಗ : ಭದ್ರಾ ಕಾಲುವೆಗಳಿಗೆ ನೀರು ಹರಿಸುವ ಸಂಬಂಧ ಹೊಸ ವರ್ಷದ ಆರಂಭದಲ್ಲಿಯೇ ಸಭೆ ಕರೆಯಲಾಗಿದೆ. ಶಿವಮೊಗ್ಗ ನಗರದ ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ ಕಚೇರಿಯ (ಕಾಡಾ) ಸಭಾಂಗಣದಲ್ಲಿ ಹೊಸ ವರ್ಷದ ಜನವರಿ 2ರಂದು ಬೆಳಿಗ್ಗೆ 9ಕ್ಕೆ ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ ಬೇಸಿಗೆ ಹಂಗಾಮಿಗೆ ನೀರು ಹರಿಸುವ ಕುರಿತು ತೀರ್ಮಾನ ಕೈಗೊಳ್ಳಲು ನೀರಾವರಿ ಸಲಹಾ ಸಮಿತಿ ಸಭೆ ಕರೆಯಲಾಗಿದೆ. ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.


ಅಡಿಕೆ ಬೆಳೆಗಾರರ ಗಮನಕ್ಕೆ ! ಶಿವಮೊಗ್ಗ ಮಾರುಕಟ್ಟೆಯಲ್ಲಿ ಅಡಿಕೆ ದರ ಏರಿಕೆ! ಉಳಿದೆಡೆ ಎಷ್ಟಿದೆ ಓದಿ
ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ ಈ ಬಾರಿಯ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಜಲಾಶಯದಿಂದ ನೀರು ಹರಿಸುವ ಕುರಿತು ತೀರ್ಮಾನ ಕೈಗೊಳ್ಳಲು ನೀರಾವರಿ ಸಲಹಾ ಸಮಿತಿಯ ಸಭೆಯನ್ನು ಕರೆಯಲಾಗಿದೆ. ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಜಲಾಶಯದಲ್ಲಿ ಲಭ್ಯವಿರುವ ನೀರಿನ ಸಂಗ್ರಹದ ಬಗ್ಗೆ ಚರ್ಚಿಸಿ, ಬೇಸಿಗೆ ಬೆಳೆಗೆ ಯಾವ ದಿನಾಂಕದಿಂದ ಎಷ್ಟು ದಿನಗಳ ಕಾಲ ನಾಲೆಗಳಿಗೆ ನೀರು ಹರಿಸಬೇಕು ಎಂಬ ಬಗ್ಗೆ ಅಂತಿಮ ತೀರ್ಮಾನವನ್ನು ತೆಗೆದುಕೊಳ್ಳಲಾಗುತ್ತದೆ.
ಭದ್ರಾ ಅಭಯಾರಣ್ಯದಲ್ಲಿ ಕಪ್ಪು ಸುಂದರಿ! ಕ್ಯಾಮರಾದಲ್ಲಿ ಸೆರೆಸಿಕ್ಕ ಕರಿ ಚಿರತೆ !
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

ಭದ್ರಾ ನೀರಾವರಿ ಸಲಹಾ ಸಮಿತಿ ಸಭೆ ಜ. 2 ರಂದು: ಬೇಸಿಗೆ ನೀರು ಬಿಡುವ ಬಗ್ಗೆ ಚರ್ಚೆ, Bhadra kada Meeting Scheduled for Jan 2: Decision on Summer Water Release
