ರಾಜ್ಯ ಸಚಿವ ಸಂಪುಟದಲ್ಲಿ ಶಿವಮೊಗ್ಗಕ್ಕೆ ಎರಡು ವಿಶೇಷ ಕೊಡುಗೆ ಸಿಕ್ಕಿದೆ. ಪ್ರಮುಖವಾಗಿ ಸಿಎಸ್ಆರ್ ಫಂಡ್ನಲ್ಲಿ ಶಿವಮೊಗ್ಗ ಜಿಲ್ಲೆಯ ಶಾಲೆಗೆ ಹೊಸ ಸೌಲಭ್ಯಗಳು ಸಿಗಲಿದೆ. ಈ ನಿಟ್ಟಿನಲ್ಲಿ ಒಟ್ಟು 113 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಿಸುವ ಯೋಜನೆಗೆ ಇನ್ಫೋಸಿಸ್ ಫೌಂಡೇಶನ್ ₹685.57 ಕೋಟಿ ಒದಗಿಸಲಿದೆ. (Infosys)
infosys Foundation to grant 685.57 crore for 113 Karnataka Public Schools
ರೈಲು ಪ್ರಯಾಣಿಕರ ಗಮನಕ್ಕೆ: ಒಂದು ದಿನದ ಮಟ್ಟಿಗೆ ಶಿವಮೊಗ್ಗ-ತಾಳಗುಪ್ಪ ಪ್ಯಾಸೆಂಜರ್ ರೈಲು ಸಂಚಾರ ರದ್ದು, ಕಾರಣವೇನು
ಇನ್ಫೋಸಿಸ್ ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ಈ ಮೊತ್ತವನ್ನು ನೀಡಲಿದೆ. ಇನ್ಫೋಸಿಸ್ ನೀಡುವ ಹಣದಲ್ಲಿ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ 16 ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 97 ಸರ್ಕಾರಿ ಶಾಲೆಗಳನ್ನು ಉನ್ನತೀಕರಿಸಲಾಗುತ್ತಿದೆ. ರಾಜ್ಯದಲ್ಲಿನ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲು ಸಮುದಾಯ ಮತ್ತು ಸಾಮಾಜಿಕ ಹೊಣೆಗಾರಿಕೆ ನಿಧಿ ಬಳಸಿಕೊಳ್ಳಲು ರೂಪಿಸಿದ ಸಿಸಿಎಸ್ಆರ್ ನೀತಿಗೆ ಸಂಪುಟ ಸಭೆ ಅನುಮೋದನೆ ನೀಡಿದೆ. ಇದಷ್ಟೆ ಅಲ್ಲದೆ

ಸಿಎಸ್ಆರ್ ನಿಧಿ ಬಳಕೆ ಹಾಗೂ ವೆಬ್ಪೋರ್ಟಲ್ ಮತ್ತು ಮೊಬೈಲ್ ಅಪ್ಲಿಕೇಶನ್ ಮೂಲಕ ದಾನಿಗಳಿಂದ ನೆರವು ಪಡೆಯಲು ಹೊಸ ನೀತಿ ಅನುವು ಮಾಡಿಕೊಟ್ಟಿದೆ. ಈ ಅನುದಾದ ಮೂಲಕ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳ ರಚನೆಯನ್ನು ಉನ್ನತೀಕರಿಸಿ, ಉತ್ಕೃಷ್ಟ ಸಂಸ್ಥೆಯಾಗಿಸಲು ₹36.90 ಕೋಟಿ ಅನುದಾನ ಬಿಡುಗಡೆ ಮಾಡಲು ಸಂಪುಟ ಸಭೆ ಸಮ್ಮತಿಸಿದೆ.
ಸಿಗಂದೂರು, ಸಾಗರ, ತಾಳಗುಪ್ಪ, ಶಿಕಾರಿಪುರ, ಶಿವಮೊಗ್ಗದ ಇಂಟ್ರೆಸ್ಟಿಂಗ್ ಸುದ್ದಿಗಳಿವೆ ಇವತ್ತಿನ ಇ-ಪೇಪರ್ನಲ್ಲಿ ಓದಿ
ಇದಕ್ಕೆ ಪೂರಕವಾಗಿ 2023-24ನೇ ಸಾಲಿನ ಯೋಜನೆಯಂತೆ ಬೀದರ್, ಬಳ್ಳಾರಿ, ಚಿತ್ರದುರ್ಗ, ಮೈಸೂರು, ಶಿವಮೊಗ್ಗ ಮತ್ತು ಮಂಡ್ಯ ಜಿಲ್ಲೆಗಳ ಡಯಟ್ಗಳನ್ನು ಉತ್ಕೃಷ್ಟ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳನ್ನಾಗಿ (DIET Excellence) ಪರಿವರ್ತಿಸಲು ಒಟ್ಟು 36.90 ಕೋಟಿ ರೂ.ಗಳ ಅಂದಾಜು ಮೊತ್ತದ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಬೆಂಗಳೂರು-ಮಂಗಳೂರು ನಡುವಿನ ಅಂತರ ಜಸ್ಟ್ 5 ಗಂಟೆ! ಹೇಗೆ ಗೊತ್ತಾ!?
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.

