ಶಿವಮೊಗ್ಗ ಸಂಚಾರಿ ಪೊಲೀಸ್ ಠಾಣೆಯಲ್ಲೇ ನೇಣಿಗೆ ಶರಣಾದ ಹೆಡ್ ಕಾನ್ಸ್ಟೇಬಲ್! ಡೆತ್​ನೋಟ್​ನಲ್ಲಿ ಕಾರಣ!

Suicide in Police Station ಶಿವಮೊಗ್ಗ :  ಶಿವಮೊಗ್ಗದ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್ಸ್ಟೇಬಲ್ ಮಹಮ್ಮದ್ ಜಕ್ರೀಯಾ (55) ಅವರು ಠಾಣೆಯ ಒಳಗಡೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರ ಸಾವಿಗೆ ಸಹ ಸಿಬ್ಬಂದಿಯ ಕಿರುಕುಳ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ, ಘಟನಾ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದೆ. ಮಹಮ್ಮದ್ ಜಕ್ರೀಯಾ ಅವರು ಕಳೆದ ಒಂದು ತಿಂಗಳಿನಿಂದ ರಜೆಯಲ್ಲಿದ್ದರು. ಕೇವಲ ಎರಡು ದಿನಗಳ ಹಿಂದೆಯಷ್ಟೇ ಅವರು ರಜೆ ಮುಗಿಸಿ ಪುನಃ ಕರ್ತವ್ಯಕ್ಕೆ ಹಾಜರಾಗಿದ್ದರು. 

SUNCONTROL_FINAL-scaled
 ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಮಹಮ್ಮದ್ ಜಕ್ರೀಯಾ ಆತ್ಮಹತ್ಯೆ Shivamogga Traffic Head Constable Mohammed Zakariya Dies by Suicide in Police Station
ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಮಹಮ್ಮದ್ ಜಕ್ರೀಯಾ ಆತ್ಮಹತ್ಯೆ Shivamogga Traffic Head Constable Mohammed Zakariya Dies by Suicide in Police Station

Suicide in Police Station

ಮೃತರು ಡೆತ್​ ನೋಟ್​ನಲ್ಲಿ  ನನ್ನ ಹಿರಿಯ ಅಧಿಕಾರಿಗಳು ಹಾಗೂ ನನ್ನ ಪ್ರೀತಿಯ ಗೆಳೆಯ ಹಾಗೂ ತಮ್ಮ ಆದಿಲ್  ಹಾಗೂ ನಮ್ಮ ಠಾಣೆಯ ಸಹೋದ್ಯೋಗಿಗಳೆ ನಮಸ್ಕಾರಗಳು ನಾನು ಇಲಾಖೆಯಲ್ಲಿ  26 ವರ್ಷ ನಿಷ್ಠೆಯಿಂದ ಕೆಲಸ ಮಾಡಿರುತ್ತೇನೆ  ಈಗ ಒಂದು ವರ್ಷದ ಹಿಂದೆ  ನಮ್ಮ ಠಾಣೆಯ ………… ನನಗೆ ಮಾನಸಿಕವಾಗಿ  ಕಿರುಕುಳ ನೀಡುತ್ತಿದ್ದು ಹಾಗೂ ನನ್ನ ಹತ್ತಿರ ಕಿಂಡಲ್ ಮಾಡಿ  ಜಗಳ ಮಾಡಿ  ನನ್ನ ಬಗ್ಗೆ ಸಾರ್ವಜನಿಕಲ್ಲಿ ಅಪಪ್ರಚಾರ ಮಾಡಿ ಕಿರುಕುಳ ನೀಡುತ್ತಿದ್ದರು  ಉಡುಪಿ ಪಿಎಂ ಬಂದೋಬಸ್ತಿಗೆ ಹೋದಾಗ ಅಲ್ಲೂ ಸಹ  ನನ್ನ ಬಗ್ಗೆ ಅಲ್ಲಿ ಬಂದಂತಹ ಬೇರೆ ಜಿಲ್ಲೆಯ  ಸಿಬ್ಬಂದಿಯವರ ಹತ್ತಿರ  ಅಪಪ್ರಚಾರ ಮಾಡುತ್ತಿದ್ದು  ಅದನ್ನು ನಾನು ಮನಸ್ಸಿಗೆ ಹಚ್ಚಿಕೊಂಡು ಅಂದರಿಂದ ನನ್ನ ಆರೋಗ್ಯ ಸರಿ ಇರುವುದಿಲ್ಲ ನಾನು ನಮ್ಮ ಠಾಣೆಯ ವಿಚಾರವನ್ನು ನಮ್ಮ ಮನೆಯಲ್ಲಿ ಯಾರತ್ರ ಹೇಳಿಕೊಳ್ಳುವುದಿಲ್ಲ ಆದರೆ ಜಗಳ ಮಾಡಿದ ಬಗ್ಗೆ ಆದಿಲ್ ರವರ ಹತ್ತಿರ ಹೇಳಿಕೊಂಡಿರುತ್ತೇನೆ  ಹಾಗೂ ನನ್ನ ಬಗ್ಗೆ ನನ್ನ ಕರ್ತವ್ಯದ ಬಗ್ಗೆ ರಾಧಾ ಮೇಡಂ ಹಾಗೂ ಕವಿತಾ ಮೇಡಂ ಹತ್ತಿರ ಅವನಿಗೆ ಯಾಕೆ ಅಲ್ಲಿ ಹಾಕಿದಿರಿ ಇಲ್ಲಿ ಹಾಕಿದ್ದೀರಿ ಅಂತ ಕೇಳುತ್ತಾನೆ  ಹಾಗೂ ನನ್ನ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಾನೆ ಆದರಿಂದ ನಾನು ನೊಂದು ಆತ್ಮಹತ್ಯೆ ಮಾಡಿಕೊಂಡಿರುತ್ತೇನೆ ನನ್ನ ಸಾವಿಗೆ ………..ಕಾರಣ ಎಂದು ಬರೆದುಕೊಂಡಿದ್ದಾರೆ 

ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದ ಸಮೀಪವಿರುವ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲೇ ಘಟನೆ ನಡೆದಿದ್ದು  ಮಾಹಿತಿ ತಿಳಿಯುತ್ತಿದ್ದಂತೆಯೇ ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ (SP) ಬಿ. ನಿಖಿಲ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸ್ತಿದ್ದಾರೆ. 

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್  Facebook whatsapp  , whatsapp chanel  instagram,  youtube,  telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ  google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ   malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್​ಗಳನ್ನು ಕ್ಲಿಕ್ ಮಾಡಿ ಓದಬಹುದು. 

 ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಮಹಮ್ಮದ್ ಜಕ್ರೀಯಾ ಆತ್ಮಹತ್ಯೆ Shivamogga Traffic Head Constable Mohammed Zakariya Dies by Suicide in Police Station
ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಮಹಮ್ಮದ್ ಜಕ್ರೀಯಾ ಆತ್ಮಹತ್ಯೆ Shivamogga Traffic Head Constable Mohammed Zakariya Dies by Suicide in Police Station

ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಮಹಮ್ಮದ್ ಜಕ್ರೀಯಾ ಆತ್ಮಹತ್ಯೆ Shivamogga Traffic Head Constable Mohammed Zakariya Dies by Suicide in Police Station

malenadutoday add

SUNCONTROL_FINAL-scaled