ಸಾಲಬಾಧೆ, ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

This Article Written by / Prathapa thirthahalli / ಜನವರಿ 13, 2026

 Haratalu Devikoppa 45 Year Old Man Ends Life

ಹರತಾಳು: ಸಾಲಭಾದೆಯಿಂದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ದೇವಿಕೊಪ್ಪ ಗ್ರಾಮದಲ್ಲಿ ನಡೆದಿದೆ.

 Haratalu Devikoppa 45 Year Old Man Ends Life
Haratalu Devikoppa 45 Year Old Man Ends Life

ಮನೆ ಮಾಲೀಕರು ಶಿವಮೊಗ್ಗದಲ್ಲಿದ್ದಾಗ ಆನವಟ್ಟಿಯಲ್ಲಿ ನಡೀತು ಈ ಘಟನೆ 

ದೇವಿಕೊಪ್ಪ ನಿವಾಸಿ ಗುರುರಾಜ್ ಬಿನ್ ನಾರಾಯಣ್ ಆಚಾರ್ (45) ಮೃತಪಟ್ಟ ದುರ್ದೈವಿ. ಇವರು ಮಂಗಳವಾರದಂದು ತಮ್ಮ ಮನೆಯ ಪಕ್ಕದಲ್ಲೇ ಇರುವ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.  ಕುಟುಂಬ ಸದಸ್ಯರು ನೀಡಿದ ಮಾಹಿತಿಯಂತೆ, ಗುರುರಾಜ್ ಅವರು ಕಳೆದ ಕೆಲವು ಸಮಯದಿಂದ ತೀವ್ರವಾದ ಸಾಲಬಾಧೆಯಿಂದ ಬಳಲುತ್ತಿದ್ದರು. ಆರ್ಥಿಕ ಮುಗ್ಗಟ್ಟು ತಂದೊಡ್ಡಿದ ಮಾನಸಿಕ ಒತ್ತಡದಿಂದ ಬೇಸತ್ತು ಅವರು ಈ ತೀವ್ರ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. 

ಘಟನೆಯ ಬಗ್ಗೆ ವಿಷಯ ತಿಳಿದ ಕೂಡಲೇ ಸ್ಥಳೀಯರು ಮತ್ತು ಕುಟುಂಬಸ್ಥರು ರಿಪ್ಪನ್‌ಪೇಟೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. 

 Haratalu Devikoppa 45 Year Old Man Ends Life

This Article Written by / Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಮುಂದಿನ ಸುದ್ದಿ ಒದಿ