Shimoga | ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಕ್ರಾಸ್ ಬಳಿ ನಿನ್ನೆ ರಾತ್ರಿ ದೊಡ್ಡ ಆಕ್ಸಿಡೆಂಟ್ ಆಗಿತ್ತು. ಈ ಘಟನೆಯಲ್ಲಿ ಮೃತರ ಸಂಖ್ಯೆ ಮೂರಕ್ಕೆ ಏರಿದೆ. ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ನಡೆದ ಸಂಭವಿಸಿದ ಅಪಘಾತದಲ್ಲಿ ಮಗು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಚನ್ನಗಿರಿಯಿಂದ ಶೃಂಗೇರಿಯತ್ತ ಆರು ಪ್ರಯಾಣಿಕರೊಂದಿಗೆ ಸಾಗುತ್ತಿದ್ದ ಸ್ವಿಫ್ಟ್ ಕಾರು ಹಾಗೂ ಮಂಗಳೂರಿನಿಂದ ರಾಯಚೂರು ಕಡೆಗೆ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಡುವೆ ಡಿಕ್ಕಿಯಾಗಿ ಈ ಘಟನೆ ನಡೆದಿದೆ.

ಮೃತರನ್ನು ಕಾರಿನ ಚಾಲಕ ರಿಯಾಜ್ ಅಹಮದ್, ಪಕ್ಕದ ಸೀಟಿನಲ್ಲಿದ್ದ ಫಾತಿಮಾ ಮತ್ತು ಒಂದು ಮಗು (ಹೆಸರು ತಿಳಿದುಬಂದಿಲ್ಲ) ಎಂದು ಗುರುತಿಸಲಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಬಸ್‌ನ ಮುಂಭಾಗಕ್ಕೂ ಹಾನಿಯಾಗಿದೆ. ಬಸ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರಿಗೆ ಏನಾಗಿಲ್ಲ.
ಉಳಿದಂತೆ, ಕಾರಿನಲ್ಲಿದ್ದ ಉಳಿದ ಮೂವರು ವ್ಯಕ್ತಿಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ತೀರ್ಥಹಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.
ನೀವು ಡಿಗ್ರಿ ಹೋಲ್ಡರ್ಸಾ! ಪದವೀಧರರ ಕ್ಷೇತ್ರದ ವೋಟರ್ ಲಿಸ್ಟ್ನಲ್ಲಿ ಹೆಸರು ಸೇರಿಸಿ! ಇಲ್ಲಿದೆ ಮಾಹಿತಿ




