Shimoga | ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಚರ್ಚೆ ಜೋರಾಗಿದೆ. ಈ ನಡುವೆ ಇದೆ ವಿಚಾರದ ಬಗ್ಗೆ ಕುರಿತು ಶ್ರೀಶೈಲ ಪೀಠದ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮಹಾಸಭೆಯ ಅಧ್ಯಕ್ಷರಾಗಿ ಆಯ್ಕೆಯಾದರೆ ಅದರಲ್ಲಿ ಯಾವುದೇ ತಪ್ಪಿಲ್ಲ ಎಂದು ಶ್ರೀಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಸ್ವಾಮೀಜಿ ಮಹಾಸಭೆಯ ಅಧ್ಯಕ್ಷರ ಆಯ್ಕೆಯು ಸಂಸ್ಥೆಯ ಬೈಲಾ ಹಾಗೂ ನಿಯಮಾವಳಿಗಳ ಅನ್ವಯವೇ ನಡೆಯಲಿದೆ ಎಂದು ಸ್ಪಷ್ಟಪಡಿಸಿದರು. ಪ್ರಸ್ತುತ ಅಧ್ಯಕ್ಷ ಸ್ಥಾನಕ್ಕೆ ಯಡಿಯೂರಪ್ಪ ಅವರ ಹೆಸರು ಪ್ರಮುಖವಾಗಿ ಕೇಳಿಬರುತ್ತಿದೆ. ಅವರೊಂದಿಗೆ ಇತರೆ ಗಣ್ಯರ ಹೆಸರುಗಳು ಕೂಡ ಚರ್ಚೆಯಲ್ಲಿವೆ. ಯಡಿಯೂರಪ್ಪ ಅವರು ನಾಡಿಗೆ ಉತ್ತಮ ಸೇವೆ ಸಲ್ಲಿಸಿದ್ದು, ಅವರು ಮಹಾಸಭೆಯ ನೇತೃತ್ವ ವಹಿಸುವುದರಲ್ಲಿ ಆಕ್ಷೇಪವಿಲ್ಲ ಎಂದು ತಿಳಿಸಿದರು. ಜೊತೆಯಲ್ಲಿ ಇಂತವರೇ ಅಧ್ಯಕ್ಷರಾಗಬೇಕೆಂದು ಒತ್ತಾಯಿಸುವುದಿಲ್ಲ ಅಥವಾ ನಾವು ಸೂಚಿಸಿದವರಿಗೆ ಪಟ್ಟ ಕಟ್ಟಬೇಕೆಂಬ ಆಗ್ರಹವೂ ಇಲ್ಲ. ಎಲ್ಲವೂ ನಿಯಮಬದ್ಧವಾಗಿ ಜರುಗಲಿದೆ ಎಂದರು.

ರಂಗಾಯಣದಿಂದ ಶಿವಮೊಗ್ಗದಲ್ಲಿ ರಂಗ ಸಂಕ್ರಾಂತಿ | ಜನವರಿ 14 ರಿಂದ ಆರು ದಿನ ವಿಶೇಷ ನಾಟಕ! ಮಿಸ್ ಮಾಡಬೇಡಿ
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.
