ಭದ್ರಾ ನಾಲೆಯಲ್ಲಿ ಬಟ್ಟೆ ತೊಳೆಯಲು ಹೋದ ಒಂದೇ ಕುಟುಂಬದ ನಾಲ್ವರು ಕಾಣೆ! ಏನಾಯ್ತು

This Article Written by / ajjimane ganesh / ಜನವರಿ 18, 2026

Bhadra Canal Tragedy Four family members went missing in Bhadra Canal near Arabilichi Camp

Shimoga | ಭದ್ರಾವತಿ ತಾಲ್ಲೂಕಿನ ಅರಬಿಳಚಿ ಕ್ಯಾಂಪ್ ವ್ಯಾಪ್ತಿಯ ಭದ್ರಾ ನಾಲೆಯಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಅನಾಹುತದಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿದ್ದಾರೆ. ನಾಲೆಯ ಬಳಿ ಬಟ್ಟೆ ತೊಳೆಯಲು ಹೋದವರು ಎಲ್ಲಿಯು ಕಾಣುತ್ತಿಲ್ಲ, ಆಕಸ್ಮಿಕವಾಗಿ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ನಾಪತ್ತೆಯಾದವರನ್ನು ನೀಲಾ ಬಾಯಿ (50), ಇವರ ಪುತ್ರ ರವಿ (23), ಪುತ್ರಿ ಶ್ವೇತಾ (24) ಹಾಗೂ ಅಳಿಯ ಪರಶುರಾಮ (28) ಎಂದು ಗುರುತಿಸಲಾಗಿದೆ.

Malenadu Today Shivamogga

ಶಿವಮೊಗ್ಗ ಮಹಾನಗರ ಪಾಲಿಕೆಗೆ ಲೋಕಾಯುಕ್ತ ಶಾಕ್, ಕಡತಗಳ ಪರಿಶೀಲನೆ, ಸಿಬ್ಬಂದಿಗೆ ತರಾಟೆ

ಸ್ಥಳೀಯರು ಹೇಳುವಂತೆ, ನಾಲೆಯ ದಡದಲ್ಲಿ ಬಟ್ಟೆ ತೊಳೆಯುತ್ತಿದ್ದಾಗ ಓರ್ವ ಸದಸ್ಯರು ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿದ್ದಾರೆ. ಈ ವೇಳೆ ಅವರನ್ನು ರಕ್ಷಿಸಲು ಪ್ರಯತ್ನಿಸಿದ ಕುಟುಂಬದ ಇತರ ಮೂವರು ಕೂಡ ನೀರಿನ ರಬಸಕ್ಕೆ ಸಿಲುಕಿ ನಾಪತ್ತೆಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಈ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಹೊಳೆಹೊನ್ನೂರು ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿದ್ದಾರೆ.

Malenadu Today Shivamogga
Arabilichi Camp

ಪ್ರಸ್ತುತ ಅಗ್ನಿಶಾಮಕ ದಳದ ಸಿಬ್ಬಂದಿ ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಹೊಳೆಹೊನ್ನೂರು ಪೊಲೀಸರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು, ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ. 

ಶಿವಮೊಗ್ಗ:  ಬಾಗಿಲು ಒಡೆದು ಒಳ ನುಗ್ಗಿದ ಅಕ್ಕ ಪಡೆ, ಉಳಿಯಿತು ವಿದ್ಯಾರ್ಥಿನಿ ಜೀವ 

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್  Facebook whatsapp  , whatsapp chanel  instagram,  youtube,  telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ  google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ   malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್​ಗಳನ್ನು ಕ್ಲಿಕ್ ಮಾಡಿ ಓದಬಹುದು. 

ಭದ್ರಾವತಿಯಲ್ಲಿ ಬಸ್ ಡಿಕ್ಕಿಗೆ ಬೈಕ್ ಸವಾರ ಸ್ಥಳದಲ್ಲೇ ಸಾವು! ಅಪಘಾತ, ಗಲಾಟೆ, ಅಳಿಯನ ಕಿರಿಕಿರಿ! ಇವತ್ತಿನ ಶಾರ್ಟ್ ನ್ಯೂಸ್​

Malenadu Today Shivamogga
Arabilichi Camp
Four family members went missing in Bhadra Canal near Arabilichi Camp ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಅರಬಿಳಚಿ ಕ್ಯಾಂಪ್ ಬಳಿ ಭದ್ರಾ ನಾಲೆಯಲ್ಲಿ ಬಟ್ಟೆ ತೊಳೆಯಲು ಹೋದ ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿದ್ದಾರೆ. ಪೊಲೀಸರು ಮತ್ತು ಅಗ್ನಿಶಾಮಕ ದಳದಿಂದ ಶೋಧ ಕಾರ್ಯ ಪ್ರಗತಿಯಲ್ಲಿದೆ.

This Article Written by / ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯ್​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ

shivamogga news,ಶಿವಮೊಗ್ಗ ಸುದ್ದಿ

ಮುಂದಿನ ಸುದ್ದಿ ಒದಿ