ಶಿವಮೊಗ್ಗ : ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ರಾಜಕೀಯ ಪಕ್ಷಗಳ ಅಧಿಕೃತ ಚಿಹ್ನೆಗಳ ಅಡಿಯಲ್ಲೇ ನಡೆಸುವಂತೆ ಮಾಜಿ ವಿಧಾನ ಪರಿಷತ್ ಸದಸ್ಯ ಆರ್ ಕೆ ಸಿದ್ರಾಮಣ್ಣ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.


ಶಿವಮೊಗ್ಗ: ಮನೆಗೆ ನುಗ್ಗಿ ಬಾಯಿ ಕಟ್ಟಿ 4 ಬಳೆ ದೋಚಿದ ಕಳ್ಳರು; ಅಸಲಿ ವಿಷಯ ತಿಳಿದರೆ ನೀವು ನಗುವುದು ಗ್ಯಾರಂಟಿ
ಇಂದು ನಗರದ ಪತ್ರಿಕಾ ಭವನದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಂಬಂಧ ಅಗತ್ಯ ತಿದ್ದುಪಡಿ ತರಬೇಕು ಅಥವಾ ಸುಗ್ರೀವಾಜ್ಞೆಯ ಮೂಲಕ ಈ ಕ್ರಮವನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.
Demanding Party Symbols ರಾಜ್ಯ ಸರ್ಕಾರವು ಹಲವು ವರ್ಷಗಳ ನಂತರ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಚುನಾವಣೆಗಳನ್ನು ಒಟ್ಟಾಗಿ ನಡೆಸಲು ಮುಂದಾಗಿರುವುದು ಸ್ವಾಗತಾರ್ಹ ಎಂದು ಅವರು ತಿಳಿಸಿದರು. ಕೇಂದ್ರ ಸರ್ಕಾರವು ಕೂಡ ಜನಗಣತಿಯ ನಂತರ ಒಂದು ದೇಶ ಒಂದು ಚುನಾವಣೆ ನಡೆಸುವ ಉದ್ದೇಶ ಹೊಂದಿದೆ. ಆದರೆ ಸದ್ಯದ ವ್ಯವಸ್ಥೆಯಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳಿಗೆ ರಾಷ್ಟ್ರೀಯ ಪಕ್ಷಗಳ ಚಿಹ್ನೆಗಳನ್ನು ನೀಡಲಾಗುತ್ತದೆಯಾದರೂ, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಇದನ್ನು ಕೈಬಿಡಲಾಗಿದೆ. ಇದರಿಂದ ಮತದಾರರಿಗೆ ಅಭ್ಯರ್ಥಿಗಳ ಬಗ್ಗೆ ಸ್ಪಷ್ಟ ಮಾಹಿತಿ ಸಿಗದೆ ಗೊಂದಲ ಉಂಟಾಗುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು.
Demanding Party Symbols ಪಕ್ಷದ ಚಿಹ್ನೆಗಳಿಲ್ಲದೆ ಚುನಾವಣೆ ನಡೆಯುವುದರಿಂದ ಗೆದ್ದ ಅಭ್ಯರ್ಥಿಗಳು ಆಮಿಷಗಳಿಗೆ ಒಳಗಾಗಿ ದಿಕ್ಕು ತಪ್ಪುವ ಸಾಧ್ಯತೆ ಇರುತ್ತದೆ. ಇದು ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಡುವುದಲ್ಲದೆ, ಪ್ರಾಮಾಣಿಕ ಹಾಗೂ ಸುಸೂತ್ರ ಆಡಳಿತ ನಡೆಸಲು ಅಡ್ಡಿಯಾಗುತ್ತದೆ. ಅಲ್ಲದೆ, ಗ್ರಾಮ ಪಂಚಾಯಿತಿಗಳಲ್ಲಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳು ಕೆಲವೇ ತಿಂಗಳುಗಳಿಗೊಮ್ಮೆ ಬದಲಾಗುತ್ತಿರುವುದರಿಂದ ಅಭಿವೃದ್ಧಿ ಕುಂಠಿತಗೊಳ್ಳುತ್ತಿದೆ. ಆಡಳಿತ ವ್ಯವಸ್ಥೆ ಅಧಿಕಾರಿಗಳ ಪಾಲಾಗಿದ್ದು, ಚುನಾಯಿತ ಪ್ರತಿನಿಧಿಗಳಿಗೆ ಮನ್ನಣೆ ಸಿಗದಂತಾಗಿದೆ. 1981ಕ್ಕಿಂತ ಮೊದಲು ಮಂಡಲ್ ಪಂಚಾಯತ್ ಚುನಾವಣೆಗಳು ಪಕ್ಷದ ಚಿಹ್ನೆಗಳ ಅಡಿಯಲ್ಲೇ ನಡೆಯುತ್ತಿದ್ದವು ಎಂದರು
ಭಾರತ ಚುನಾವಣಾ ಆಯೋಗದ 1968ರ ಆದೇಶದಂತೆ ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಪಕ್ಷಗಳಿಗೆ ನೀಡುವ ಚಿಹ್ನೆಗಳನ್ನು ಗ್ರಾಮ ಪಂಚಾಯಿತಿ ಚುನಾವಣೆಗಳಿಗೂ ಅನ್ವಯಿಸುವುದರಿಂದ ಗ್ರಾಮಗಳಲ್ಲಿ ಶಾಂತಿ, ಸೌಹಾರ್ದತೆ ಮತ್ತು ಭ್ರಷ್ಟಾಚಾರ ಮುಕ್ತ ಆಡಳಿತ ನೀಡಲು ಸಾಧ್ಯವಾಗುತ್ತದೆ. ಆದ್ದರಿಂದ ಸರ್ಕಾರ ತಕ್ಷಣವೇ ಈ ನಿಟ್ಟಿನಲ್ಲಿ ಕಾನೂನು ತಿದ್ದುಪಡಿ ತರಬೇಕೆಂದು ಸಿದ್ರಾಮಣ್ಣ ಮನವಿ ಮಾಡಿದರು.
Demanding Party Symbols for Gram Panchayat Elections

