ಬೆಂಗಳೂರು ಪೊಲೀಸರು ಬ್ಲಾಕ್‌ಮೇಲ್ ಪ್ರಕರಣವೊಂದರಲ್ಲಿ ಚಿಕ್ಕಮಗಳೂರು ಯುವತಿಯೊಬ್ಬಳನ್ನು ಅರೆಸ್ಟ್ ಮಾಡಿದ್ದಾರೆ. ಈ ಪ್ರಕರಣದ ವಿವರ ನೋಡುವುದಾದರೆ. ರಾಜ್ಯದ ಪ್ರತಿಷ್ಠಿತ ಮಠವೊಂದರ ಸ್ವಾಮೀಜಿಯವರಿಗೆ ಬೆದರಿಕೆ ಹಾಕಿ ಹಣ ಸುಲಿಗೆ ಮಾಡುತ್ತಿದ್ದ ಆರೋಪದ ಅಡಿಯಲ್ಲಿ ಚಿಕ್ಕಮಗಳೂರು ಮೂಲದ ಯುವತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.

ನ್ಯಾಮತಿಯಲ್ಲಿ ಅಡ್ಡಗಟ್ಟಿ ಸುಲಿಗೆ! ದಾವಣಗೆರೆ ಪೊಲೀಸರಿಂದ ಶಿವಮೊಗ್ಗದ ಇಬ್ಬರು ಅರೆಸ್ಟ್!
ಬಂಧಿತ ಆರೋಪಿ ಸ್ವಾಮೀಜಿ ಒಬ್ಬರಿಗೆ ಇದುವರೆಗೂ ಬ್ಲಾಕ್‌ಮೇಲ್ ಮಾಡುತ್ತಾ 4.5 ಲಕ್ಷ ರೂಪಾಯಿ ವಸೂಲಿ ಮಾಡಿದ್ದಳು ಎಂಬ ದೂರು ಇದೆ. ಅಲ್ಲದೆ ಬರೋಬ್ಬರಿ 1 ಕೋಟಿ ರೂಪಾಯಿ ನೀಡುವಂತೆ ಡಿಮ್ಯಾಂಡ್ ಇಟ್ಟಿದ್ದಳಂತೆ. ಹೀಗಾಗಿ ಈ ಸಂಬಂಧ ಸ್ವತಃ ಸ್ವಾಮೀಜಿಯವರೇ ದೂರು ನೀಡಿದ್ದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಸಂಸದರ ಸಂವಾದ! ಈಶ್ವರಪ್ಪನವರ ಆಕ್ರೋಶ! ಶಿವಮೊಗ್ಗ ಪತ್ರಿಕಾಭವನದಲ್ಲಿ? ಇವತ್ತಿನ ಇ-ಪೇಪರ್ ಓದಿ
ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಈಕೆ ಕಳೆದ 4 ರಿಂದ 5 ತಿಂಗಳ ಹಿಂದೆ ಸ್ವಾಮೀಜಿಗೆ ದೂರವಾಣಿ ಕರೆ ಮಾಡಿ ಪರಿಚಯ ಮಾಡಿಕೊಂಡಿದ್ದಾಳೆ. ಆನಂತರ ಬ್ಲಾಕ್‌ಮೇಲ್ ಮಾಡಲು ಆರಂಭಿಸಿದ್ದಾಳೆ. ಭಯಬಿದ್ದ ಸ್ವಾಮೀಜಿ ಬೆಂಗಳೂರಿಗೆ ಬಂದಿದ್ದ ಸಂದರ್ಭದಲ್ಲಿ ಆರೋಪಿಗೆ 4.5 ಲಕ್ಷ ರೂಪಾಯಿ ಹಣ ನೀಡಿದ್ದರು. ಹೀಗಿದ್ದರೂ ಇನ್ನೂ ಒಂದು ಕೋಟಿ ಕೊಡಬೇಕು ಎಂದು ಡಿಮ್ಯಾಂಡ್ ಇಟ್ಟಿದ್ದರಿಂದ ಬೇಸತ್ತ ಸ್ವಾಮೀಜಿ ಪೊಲೀಸರ ಮೊರೆಹೋಗಿದ್ದರ. ಈ ದೂರಿನ ಅನ್ವಯ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಶಿವಮೊಗ್ಗಕ್ಕೆ ಬಂದ ಅಲೋಕ್ ಕುಮಾರ್
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook, whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epapermalenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.
