ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ ವಿಚಾರ, ಸಂಸದ ಬಿವೈ ರಾಘವೇಂದ್ರ ಏನಂದ್ರು

ಶಿವಮೊಗ್ಗ  ಕೇಂದ್ರ ಸರ್ಕಾರದ ವಿರುದ್ಧದ ಟೀಕೆಗಳನ್ನೇ ಪ್ರಧಾನ ಅಜೆಂಡಾ ಮಾಡಿಕೊಂಡು ಸಿದ್ಧಪಡಿಸಲಾಗಿದ್ದ ಭಾಷಣದ ಪ್ರತಿಯನ್ನು ಓದಲು ನಿರಾಕರಿಸಿದ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ನಾಯಕರು ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಆರೋಪಿಸಿದ್ದಾರೆ. 

21 ವರ್ಷದ ಯುವಕನಿಗೆ 20 ವರ್ಷ ಜೈಲು, 50 ಸಾವಿರ ದಂಡ! ಶಿವಮೊಗ್ಗ ಕೋರ್ಟ್ ಆದೇಶ

MP Raghavendra ಇಂದು ಶಿವಮೊಗ್ಗದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ನಡೆ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವಂತಿದೆ ರಾಜ್ಯಪಾಲರು ಸದನದ ಸಂಪ್ರದಾಯಕ್ಕೆ ಚ್ಯುತಿ ಬಾರದಂತೆ ನಡೆದುಕೊಂಡಿದ್ದಾರೆ. ಆದರೆ, ಅವರು ಸರ್ಕಾರದ ಟೀಕಾತ್ಮಕ ಭಾಷಣವನ್ನು ಓದದಿದ್ದಕ್ಕೆ ಕಾಂಗ್ರೆಸ್ ನಾಯಕರು ‘ಮ್ಯಾನ್ ಹ್ಯಾಂಡಲ್’ ಮಾಡುವ ರೀತಿಯಲ್ಲಿ ವರ್ತಿಸಿದ್ದಾರೆ. ಸದನದಲ್ಲಿ ಮಾರ್ಷಲ್‌ಗಳು ಇಲ್ಲದಿದ್ದರೆ ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿತ್ತು. ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರಂತಹವರು ಹೈಕಮಾಂಡ್ ಮೆಚ್ಚಿಸಲು ಇಷ್ಟು ಕೆಳಮಟ್ಟದ ನಡವಳಿಕೆ ತೋರಿರುವುದು ಅವರ ಹಿರಿತನಕ್ಕೆ ಗೌರವ ತರುವುದಿಲ್ಲ ಎಂದು ಸಂಸದರು ಆಕ್ರೋಶ ವ್ಯಕ್ತಪಡಿಸಿದರು. 

ರಾಜ್ಯದ ಅಭಿವೃದ್ಧಿ ಶೂನ್ಯವಾಗಿದ್ದು, ಗ್ಯಾರಂಟಿ ಯೋಜನೆಗಳ ವೈಫಲ್ಯವನ್ನು ಮುಚ್ಚಿಡಲು ಸರ್ಕಾರ ವಿಬಿ ರಾಮ್ ಜಿ ಯೋಜನೆಯ ವಿರುದ್ಧ ಅಪಪ್ರಚಾರ ಮಾಡುತ್ತಿದೆ ಎಂದು ರಾಘವೇಂದ್ರ ದೂರಿದರು. ನರೇಗಾ ಯೋಜನೆಯಲ್ಲಿನ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಕೇಂದ್ರ ತಂದಿರುವ ಬದಲಾವಣೆಗಳನ್ನು ಸಹಿಸಲಾಗದೆ ಕಾಂಗ್ರೆಸ್ ನಾಯಕರು ಸಾರ್ವಜನಿಕರನ್ನು ಹಾದಿ ತಪ್ಪಿಸುತ್ತಿದ್ದಾರೆ. ಈ ಕೂಡಲೇ ಅಸಭ್ಯವಾಗಿ ವರ್ತಿಸಿದ ಶಾಸಕರ ವಿರುದ್ಧ ಸ್ಪೀಕರ್ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದರು.

MP Raghavendra Slams Congress Over Governor Row
MP Raghavendra Slams Congress Over Governor Row

MP Raghavendra Slams Congress Over Governor Row

shivamogga car decor sun control house
shivamogga car decor sun control house