Shivamogga Congress Protests | ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿನ ಭಾಷಣ ಮೊಟಕುಗೊಳಿಸುವ ಮೂಲಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಂವಿಧಾನಕ್ಕೆ ಅಪಮಾನ ಎಸಗಿದ್ದಾರೆ ಎಂದು ಆರೋಪಿಸಿ ಶಿವಮೊಗ್ಗ ನಗರ ಕಾಂಗ್ರೆಸ್ ಕಾರ್ಯಕರ್ತರು ಶಿವಮೊಗ್ಗ ಪಾಲಿಕೆ ಆವರಣದಲ್ಲಿರುವ ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.
ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿರುವ ರಾಜ್ಯಪಾಲರನ್ನು ರಾಷ್ಟ್ರಪತಿಗಳು ತಕ್ಷಣವೇ ವಾಪಸ್ ಕರೆಸಿಕೊಳ್ಳಬೇಕು ಎಂದು ಆಗ್ರಹಿಸಿ ‘ರಾಜ್ಯಪಾಲ ಹಠಾವೋ-ಕರ್ನಾಟಕ ಬಚಾವೋ’ ಘೋಷಣೆ ಕೂಗಿದರು.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್. ರಮೇಶ್, ರಾಜ್ಯಪಾಲರು ಸಂವಿಧಾನದ ಅಡಿಯಲ್ಲಿ ಕೆಲಸ ನಿರ್ವಹಿಸಬೇಕೇ ಹೊರತು ಕೇಂದ್ರ ಸರ್ಕಾರದ ಅಧೀನದಲ್ಲಿ ಕೆಲಸ ಮಾಡಬಾರದು ಎಂದು ಕಿಡಿಕಾರಿದರು. ಅಧಿವೇಶನದಲ್ಲಿ ರಾಜ್ಯಪಾಲರು ನಡೆದುಕೊಂಡ ರೀತಿ ಗಮನಿಸಿದರೆ ಅವರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿರುವುದು ಸಾಬೀತಾಗಿದೆ.
ವರ್ಷದ ಮೊದಲ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡುವುದು ಸಂಸದೀಯ ಸಂಪ್ರದಾಯ. ಆದರೆ ಭಾಷಣದಲ್ಲಿ ಆಕ್ಷೇಪಾರ್ಹ ಸಾಲುಗಳಿವೆ ಎಂಬ ಕಾರಣವನ್ನು ಮುಂದಿಟ್ಟುಕೊಂಡು, ಭಾಷಣವನ್ನು ಅರ್ಧಕ್ಕೆ ನಿಲ್ಲಿಸುವ ಮೂಲಕ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನ ಸ್ವತಃ ರಾಜ್ಯಪಾಲರೇ ಮಾಡಿರುವುದು ಇದೇ ಮೊದಲ ಬಾರಿ. ಇಂತಹ ನಡೆ ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಮಾರಕ ಎಂದು ಆಕ್ರೋಶ ವ್ಯಕ್ತಪಡಿಸಿದರು.

Shivamogga Congress Protests Against Governor Thawar Chand Gehlot; Demands His Recall
Shivamogga Congress Protests
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಇಸ್ಮಾಯಿಲ್ ಖಾನ್, ರಾಜ್ಯಪಾಲರು ಸದನದಲ್ಲಿ ಭಾಷಣ ಮಾಡುವ ಮೂಲಕ ಅಲ್ಲಿನ ಗಾಂಭೀರ್ಯವನ್ನು ಕಾಪಾಡಬೇಕಿತ್ತು.
ಆದರೆ ಅವರ ನಡೆಯೇ ಸದನದಲ್ಲಿ ಗದ್ದಲಕ್ಕೆ ಕಾರಣವಾಗಿರುವುದು ದುರದೃಷ್ಟಕರ. ಇಂತಹ ರಾಜ್ಯಪಾಲರು ನಮಗೆ ಅಗತ್ಯವಿಲ್ಲ. ಆದ್ದರಿಂದ ಕೂಡಲೇ ರಾಷ್ಟ್ರಪತಿಗಳು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ವಾಪಸ್ ಕರೆಸಿಕೊಳ್ಳಬೇಕು ಎಂದು ಒತ್ತಾಯಿಸಿದರು.
ಮಾಜಿ ಪಾಲಿಕೆ ಸದಸ್ಯ ಎಚ್.ಸಿ. ಯೋಗೇಶ್ ಮಾತನಾಡಿ, ಯುವ ಕಾಂಗ್ರೆಸ್ ವತಿಯಿಂದ ರಾಜ್ಯಪಾಲ ಹಠಾವೋ-ಕರ್ನಾಟಕ ಬಚಾವೋ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ. ಒಂದು ವೇಳೆ ಅವರನ್ನು ಕೇಂದ್ರ ಸರ್ಕಾರ ವಾಪಸ್ ಕರೆಸಿಕೊಳ್ಳದಿದ್ದರೆ ಯುವ ಕಾಂಗ್ರೆಸ್ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಿದೆ ಎಂದು ಎಚ್ಚರಿಕೆ ನೀಡಿದರು.

Shivamogga Congress Protests Against Governor Thawar Chand Gehlot; Demands His Recall
ಶಿವಮೊಗ್ಗ: ಮನೆಗೆ ನುಗ್ಗಿ ಬಾಯಿ ಕಟ್ಟಿ 4 ಬಳೆ ದೋಚಿದ ಕಳ್ಳರು; ಅಸಲಿ ವಿಷಯ ತಿಳಿದರೆ ನೀವು ನಗುವುದು ಗ್ಯಾರಂಟಿ
ಪ್ರತಿಭಟನೆಯಲ್ಲಿ ಪ್ರಮುಖರಾದ ರಮೇಶ್ ಹೆಗ್ಗಡೆ, ಕಾಶಿ ವಿಶ್ವನಾಥ್, ಧೀರಜ್ ವನ್ನವಿಲೆ, ಶಿವಕುಮಾರ್, ಮಧುಸೂದನ್, ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಹರ್ಷಿತ್ ಗೌಡ, ಶಿವಮೊಗ್ಗ ವಿಧಾನಸಭಾ ಅಧ್ಯಕ್ಷ ಚರಣ್, ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್, ಬ್ಲಾಕ್ ಅಧ್ಯಕ್ಷರುಗಳಾದ ಗಿರೀಶ್, ಮಮದ್ ಗೌಸ್, ಪ್ರವೀಣ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಅಬ್ದುಲ್ ಸತ್ತರ್, ಮಲಗುಪ್ಪ ಶಿವು, ಆಕಾಶ್, ತೌಫಿಕ್, ಬಾಬು, ನಿಖಿಲ್, ಅನಿಲ್ ಪಾಟೀಲ್, ಅಶೋಕ, ರವಿ, ವಿಷ್ಣು, ಯೋಗೇಶ್, ಲಿಂಗರಾಜು ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡು ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿದರು.
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.
