ಭದ್ರಾವತಿ : ಕೌಟುಂಬಿಕ ಸಮಸ್ಯೆಯನ್ನು ಬಗೆಹರಿಸಲು ಸೇರಿದ್ದ ಪಂಚಾಯಿತಿಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ಪಂಚಿನಿಂದ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ್ದ ಮೂವರು ಆರೋಪಿಗಳಿಗೆ ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೈಲು ಶಿಕ್ಷೆ ಮತ್ತು ಭಾರಿ ದಂಡ ವಿಧಿಸಿ ತೀರ್ಪು ನೀಡಿದೆ.
ಮೇಲೆದ್ದ ರಾಶಿ! ಶಿವಮೊಗ್ಗ, ಸಾಗರ, ದಾವಣಗೆರೆ, ಶಿರಸಿ, ಕೊಪ್ಪ, ಮಂಗಳೂರು ಪುತ್ತೂರು ಅಡಿಕೆ ರೇಟು
Bhadravathi 2021ರ ಮೇ 1ರಂದು ವೆಂಕಟೇಶ ಗೌಡ ಎಂಬುವವರ ಮಗಳ ಕೌಟುಂಬಿಕ ವಿಚಾರವಾಗಿ ಪಂಚಾಯಿತಿ ನಡೆಸಲು ಸಿದ್ಧತೆ ನಡೆದಿತ್ತು. ಈ ಸಂದರ್ಭದಲ್ಲಿ ಆರೋಪಿಗಳು ಏಕಾಏಕಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಬ್ಬಿಣದ ಪಂಚಿನಿಂದ ಕೆನ್ನೆ ಮತ್ತು ಕಣ್ಣಿನ ಭಾಗಕ್ಕೆ ಬಲವಾಗಿ ಹೊಡೆದಿದ್ದರು. ಅಷ್ಟೇ ಅಲ್ಲದೆ, ಮರ್ಮಾಂಗಕ್ಕೆ ಕಾಲಿನಿಂದ ಒದ್ದು ಜೀವ ಬೆದರಿಕೆ ಹಾಕಿದ್ದರು. ಈ ಬಗ್ಗೆ ಭದ್ರಾವತಿಯ ಹಳೇನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಸೇರಿದಂತೆ ವಿವಿಧ ಗಂಭೀರ ಕಲಂಗಳಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ಸಮಗ್ರ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಅವರು, ಆರೋಪಿಗಳ ಮೇಲಿನ ಸಾಕ್ಷ್ಯಾಧಾರಗಳು ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಕಟಿಸಿದ್ದಾರೆ. ಎ1 ಆರೋಪಿ ಕಿರಣ್ ಗೌಡನಿಗೆ 3 ವರ್ಷ ಕಠಿಣ ಕಾರಾವಾಸ ಹಾಗೂ 36,000 ರೂ. ದಂಡ ವಿಧಿಸಲಾಗಿದೆ. ಉಳಿದಂತೆ ಎ2 ಆರೋಪಿ ಮೀನಾಕ್ಷಿ ಮತ್ತು ಎ3 ಆರೋಪಿ ಕಲಾವತಿಗೆ ತಲಾ 2 ವರ್ಷಗಳ ಕಠಿಣ ಕಾರಾವಾಸ ಮತ್ತು ಕ್ರಮವಾಗಿ 25,000 ರೂ. ಹಾಗೂ 15,000 ರೂ. ದಂಡ ವಿಧಿಸಲಾಗಿದೆ.
Bhadravathi 3 Jailed in Attempt to Murder Case


