ಶಿವಮೊಗ್ಗ : ಹೆಚ್ಚಿನ ವರದಕ್ಷಿಣೆಗಾಗಿ ಪೀಡಿಸಿ ಹೆಂಡತಿಯ ಆತ್ಮಹತ್ಯೆಗೆ ಕಾರಣನಾದ ಆರೋಪಿ ಪತಿಗೆ ಶಿವಮೊಗ್ಗದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಕಠಿಣ ಕಾರಾವಾಸದ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.

ಬ್ಯಾಂಕ್ ನೌಕರರ ಬೃಹತ್ ಪ್ರತಿಭಟನೆ, ಶಿವಮೊಗ್ಗದಲ್ಲಿ ಬ್ಯಾಂಕಿಂಗ್ ಸೇವೆ ವ್ಯತ್ಯಯ, ಕಾರಣವೇನು
ಚನ್ನಗಿರಿ ತಾಲೂಕಿನ ಅಜ್ಜಿಹಳ್ಳಿ ಮೂಲದ ಪೃಥ್ವಿರಾಜ್ ಎಂಬಾತನಿಗೆ ವರದಕ್ಷಿಣೆ ನೀಡಿ ವಿವಾಹ ಮಾಡಿಕೊಡಲಾಗಿತ್ತು. ಆದರೆ ಮದುವೆಯಾದ ನಂತರ ಪತಿ ಪೃಥ್ವಿರಾಜ್ ಹಾಗೂ ಆತನ ತಾಯಿ ಪುಷ್ಪಾ ಸೇರಿ ಮಗಳಿಗೆ ಹೆಚ್ಚಿನ ಹಣ ತರುವಂತೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಅತೀವ ಹಿಂಸೆ ನೀಡುತ್ತಿದ್ದರು. ಈ ಕಿರುಕುಳ ತಾಳಲಾರದೆ ಮನನೊಂದ ಮಹಿಳೆಯು ಕಳೆದ 2022ರ ಜೂನ್ 16ರಂದು ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದರು.
ಈ ಕೃತ್ಯಕ್ಕೆ ಸಂಬಂಧಿಸಿದಂತೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಅಂದಿನ ಪೊಲೀಸ್ ನಿರೀಕ್ಷಕ ಮಂಜುನಾಥ್ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಅಭಿಯೋಜಕ ಶಾಂತರಾಜ್ ಅವರು ಪ್ರಬಲ ವಾದ ಮಂಡಿಸಿದ್ದರು. ಪ್ರಕರಣದ ಸಂಪೂರ್ಣ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಯಶವಂತ ಕುಮಾರ್ ಅವರು ಆರೋಪಿಗಳ ಮೇಲಿನ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಈ ಕಠಿಣ ಶಿಕ್ಷೆಯನ್ನು ಪ್ರಕಟಿಸಿದ್ದಾರೆ.
ನ್ಯಾಯಾಲಯದ ಆದೇಶದಂತೆ ಒಂದನೇ ಆರೋಪಿ ಪತಿ ಪೃಥ್ವಿರಾಜ್‌ಗೆ 5 ವರ್ಷ ಕಠಿಣ ಕಾರಾವಾಸ ಹಾಗೂ 7,000 ರೂಪಾಯಿ ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲನಾದರೆ ಹೆಚ್ಚುವರಿಯಾಗಿ ಒಂದು ವರ್ಷ ಸಾಧಾರಣ ಸಜೆ ಅನುಭವಿಸಬೇಕಾಗುತ್ತದೆ. ಇನ್ನು ಎರಡನೇ ಆರೋಪಿ ಪೃಥ್ವಿರಾಜ್ ತಾಯಿ ಪುಷ್ಪಾ ಅವರಿಗೆ 3 ವರ್ಷಗಳ ಜೈಲು ಶಿಕ್ಷೆ ಮತ್ತು 4,000 ರೂಪಾಯಿ ದಂಡ ವಿಧಿಸಲಾಗಿದ್ದು, ದಂಡ ತಪ್ಪಿದಲ್ಲಿ 3 ತಿಂಗಳ ಸಜೆ ವಿಧಿಸಿ ಆದೇಶ ಹೊರಡಿಸಲಾಗಿದೆ.
Shimoga 5 Year Jail for Husband in Dowry Case


