ಶಿಕಾರಿಪುರ: ₹1 ಲಕ್ಷ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ವಿಲೇಜ್ ಅಕೌಂಟೆಂಟ್

ಶಿಕಾರಿಪುರ: ಜಮೀನಿನ ಖಾತೆ ಮಾಡಿಕೊಡಲು ಲಕ್ಷಾಂತರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು (VA ಲೋಕಾಯುಕ್ತ ಪೊಲೀಸರ ಅತಿಥಿಯಾಗಿದ್ದಾರೆ. ತಾಲೂಕು ಕಚೇರಿಯ ಕಂದಾಯ ಇಲಾಖೆಯ ವಿಠ್ಠಲ ಕೋಲ್ಹರ ಎಂಬುವವರೇ ಭ್ರಷ್ಟಾಚಾರದ ಜಾಲದಲ್ಲಿ ಸಿಲುಕಿದ ಅಧಿಕಾರಿ.

SUNCONTROL_FINAL-scaled

ಶಿವಮೊಗ್ಗ | ಬಂಗಾರವಾಯ್ತು ಬೆಳ್ಳಿ : ಕೆಜಿ ಬೆಳ್ಳಿಗೆ 3.64 ಲಕ್ಷ, 10 ಗ್ರಾಂ ಚಿನ್ನಕ್ಕೆ 1.67 ಲಕ್ಷ 

ತಾಲೂಕಿನ ಚಿಕ್ಕಬಂಜೂರು ಗ್ರಾಮದ ನಿವಾಸಿ ಜಕ್ರಿಯಾ ಬೇಗ್ ಎಂಬುವವರು ತಮ್ಮ ಜಮೀನಿನ ಖಾತೆ ಬದಲಾವಣೆಗಾಗಿ ಕಂದಾಯ ಇಲಾಖೆಗೆ ಅರ್ಜಿ ಸಲ್ಲಿಸಿದ್ದರು. ಈ ಕೆಲಸ ಮಾಡಿಕೊಡಲು ವಿಎ ವಿಠ್ಠಲ ಕೋಲ್ಹರ ಅವರು ಬರೋಬ್ಬರಿ 4 ಲಕ್ಷ ರೂಪಾಯಿ ಲಂಚ ನೀಡುವಂತೆ ಪಟ್ಟು ಹಿಡಿದಿದ್ದರು. ಅಷ್ಟು ದೊಡ್ಡ ಮೊತ್ತ ನೀಡಲು ಇಚ್ಛಿಸದ ಜಕ್ರಿಯಾ ಬೇಗ್ ಅವರು ಕೂಡಲೇ ಲೋಕಾಯುಕ್ತ ಮೆಟ್ಟಿಲೇರಿದ್ದರು. 

ಲೋಕಾಯುಕ್ತರ ಮಾರ್ಗದರ್ಶನದಂತೆ ಇಂದು ಮೊದಲ ಕಂತಿನ ರೂಪದಲ್ಲಿ 1 ಲಕ್ಷ ರೂಪಾಯಿ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ವಿಠ್ಠಲ ಕೋಲ್ಹರ ಅವರನ್ನು  ರೆಡ್​​ ಹ್ಯಾಂಡ್​​ ಆಗಿ ಹಿಡಿಯಲಾಗಿದೆ. ಲೋಕಾಯುಕ್ತ ಎಸ್ಪಿ ಎಂ.ಎಸ್. ಕೌಲಾಪುರೆ ಅವರ ನೇತೃತ್ವದ ತಂಡ ಈ ಮಿಂಚಿನ ಕಾರ್ಯಾಚರಣೆ ನಡೆಸಿದ್ದು, ಆರೋಪಿಯನ್ನು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದೆ.

Shikaripura VA Vithal Kolhar Arrested by Lokayukta

Shikaripura VA Vithal Kolhar Arrested by Lokayukta
Shikaripura VA Vithal Kolhar Arrested by Lokayukta
shivamogga car decor sun control house
shivamogga car decor sun control house
SUNCONTROL_FINAL-scaled
ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು