ಭಾರತೀಯ ರಿಸರ್ವ್ ಬ್ಯಾಂಕ್‌ನಿಂದ ಈ ಹುದ್ದೆಗಳಿಗೆ ಅರ್ಜಿ ಆಹ್ವಾನ

This Article Written by / Prathapa thirthahalli / ಫೆಬ್ರವರಿ 4, 2026

RBI Online Applications for Office Attendant Posts

ಶಿವಮೊಗ್ಗ : ಭಾರತೀಯ ರಿಸರ್ವ್ ಬ್ಯಾಂಕ್ (RBI), ಬೆಂಗಳೂರು ಶಾಖೆಯಲ್ಲಿ ಖಾಲಿ ಇರುವ ‘ಅಟೆಂಡೆಂಟ್’ (Office Attendant) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 

ಶಿವಮೊಗ್ಗದ ಬೀನಾಗೆ ಪಿ ಹೆಚ್ ಡಿ

ಈ ಕುರಿತು ಶಿವಮೊಗ್ಗದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಅಧಿಕೃತ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಜಿಲ್ಲೆಯ ಯುವಕ-ಯುವತಿಯರು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಆರ್‌ಬಿಐನ ಅಧಿಕೃತ ಜಾಲತಾಣವಾದ https://rbi.org.in/ ಗೆ ಭೇಟಿ ನೀಡಿ, ಅಲ್ಲಿರುವ ‘Recruitment for the post of Office Attendant – PY 2025’ ಎಂಬ ಲಿಂಕ್ ಕ್ಲಿಕ್ ಮಾಡುವ ಮೂಲಕ ತಮ್ಮ ವಿವರಗಳನ್ನು ದಾಖಲಿಸಬಹುದಾಗಿದೆ. (Streamlined Online Application)

ಅರ್ಜಿ ಸಲ್ಲಿಸಲು ಫೆಬ್ರವರಿ 04 ಕೊನೆಯ ದಿನಾಂಕವಾಗಿದ್ದು, ಕೂಡಲೇ ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿ, ವಿದ್ಯಾರ್ಹತೆ ಮತ್ತು ವಯೋಮಿತಿ ಸಡಿಲಿಕೆಗಳ ಕುರಿತು ತಿಳಿಯಲು ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್‌ಸೈಟ್ ಅನ್ನು ಸಂಪರ್ಕಿಸಬಹುದು.

RBI Online Applications for Attendant Posts

RBI Online Applications for Office Attendant Posts
RBI Online Applications for Office Attendant Posts
shivamogga car decor sun control house
shivamogga car decor sun control house

This Article Written by / Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಮುಂದಿನ ಸುದ್ದಿ ಒದಿ