ಶಿವಮೊಗ್ಗ: ಜಿಲ್ಲಾ ಪೊಲೀಸ್ ಇಲಾಖೆಯ ಸಿಬ್ಬಂದಿಗಳಿಗೆ ಹೊಸ ವಿನ್ಯಾಸದ ಟೋಪಿಗಳನ್ನು ನೀಡಲಾಗಿದೆ. ನಗರದ ಡಿಎಆರ್ (DAR) ಪೊಲೀಸ್ ಕವಾಯತು ಮೈದಾನದಲ್ಲಿ ಇಂದು ಬೆಳಿಗ್ಗೆ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಜಿಲ್ಲೆಯ ಪೊಲೀಸ್ ಕಾನ್ಸ್‌ಟೇಬಲ್ ಹಾಗೂ ಹೆಡ್ ಕಾನ್ಸ್‌ಟೇಬಲ್‌ಗಳಿಗೆ ನೂತನ ‘ಬ್ಲೂ ಪಿ-ಕ್ಯಾಪ್’ಗಳನ್ನು ವಿತರಿಸಲಾಯಿತು.
ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ನಿಖಿಲ್ ಬಿ, ಐಪಿಎಸ್ ರವರು ಈ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳು, ಜಿಲ್ಲಾ ಸಶಸ್ತ್ರ ಮೀಸಲು ಪಡೆ, ನಿಸ್ತಂತು ಘಟಕ (Wireless Unit) ಹಾಗೂ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳಿಗೆ ಈ ನೂತನ ಕ್ಯಾಪ್‌ಗಳನ್ನು ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳಾದ ಕಾರಿಯಪ್ಪ ಎ. ಜಿ (ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1) ಹಾಗೂ ರಮೇಶ್ ಕುಮಾರ್ ಎಸ್ (ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2) ಸೇರಿದಂತೆ ಹಲವು ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದರು.
New Blue P Caps for Shivamogga Police Staff

New Blue P Caps
