ಶಿವಮೊಗ್ಗ ಸೆಂಟ್ರಲ್ ಜೈಲಿನಿಂದ ಅಮ್ಜದ್ ಕೊ*ಲೆ ಆರೋಪಿ ಸೇರಿ ಇಬ್ಬರು ಶಿಫ್ಟ್

This Article Written by / Prathapa thirthahalli / ಫೆಬ್ರವರಿ 17, 2026

 Shimoga Jail Transfer Amjad Murder Accused 

ಶಿವಮೊಗ್ಗ: ನಗರದ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳಾಗಿರುವ ಸ್ಕ್ರ್ಯಾಪ್ ವ್ಯಾಪಾರಿ ಅಮ್ಜದ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ರೌಡಿಶೀಟರ್‌ ಒಬ್ಬನನ್ನು  ಬೇರೆ ಜೈಲುಗಳಿಗೆ ಸ್ಥಳಾಂತರಿಸಲಾಗಿದೆ. 

ಶಿವಮೊಗ್ಗ : 100 ರೂಪಾಯಿಗೆ ಸಿಗುತ್ತೆ 30 ಕೆಜಿ ಕುರಿ. ಎಲ್ಲಿ ,ಏನಿದು ಸುದ್ದಿ

ಕಳೆದ ಅಕ್ಟೋಬರ್ 03 ರಂದು ಶಿವಮೊಗ್ಗದ ಸ್ಕ್ರ್ಯಾಪ್ ವ್ಯಾಪಾರಿ ಅಮ್ಜದ್ ಅವರ ಮೇಲೆ ಯುವಕರ ಗುಂಪೊಂದು ದಾಳಿ ನಡೆಸಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅಮ್ಜಾದ್ ಸಾವನ್ನಪ್ಪಿದ ನಂತರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಒಟ್ಟು ಆರು ಜನ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದರು. ಈ ಪ್ರಕರಣದ ಪ್ರಮುಖ ಆರೋಪಿಯಾದ ಫೌಝಾನ್‌ನನ್ನು ಇಂದು ಶಿವಮೊಗ್ಗದಿಂದ ಬೆಳಗಾವಿಯ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. 

ಫೌಝಾನ್ ಜೊತೆಗೆ ಶಿವಮೊಗ್ಗದ ಕುಖ್ಯಾತ ರೌಡಿಶೀಟರ್ ಆಗಿರುವ ಕಡೆಕಲ್ ಅಬಿದ್‌ನನ್ನೂ ಸಹ ಸ್ಥಳಾಂತರಿಸಲಾಗಿದೆ. ಅಬಿದ್ ಮೇಲೆ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ 20ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ಈತನನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ರವಾನಿಸಲಾಗಿದೆ.

 Shimoga Jail Transfer Amjad Murder Accused 

 Shimoga Jail Transfer Amjad Murder Accused 
 Shimoga Jail Transfer Amjad Murder Accused 
shivamogga car decor sun control house
shivamogga car decor sun control house

This Article Written by / Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಶಿವಮೊಗ್ಗ ಜೈಲು ಶಿಫ್ಟ್

ಮುಂದಿನ ಸುದ್ದಿ ಒದಿ