ಶಿವಮೊಗ್ಗ | ಶಿವಮೊಗ್ಗ: ಭದ್ರಾವತಿಯ ಹೊಸ ಸಿದ್ದಾಪುರದಲ್ಲಿ ನಡೆದ ಗೃಹಿಣಿ ಸ್ವಾತಿ ಅವರ ಆತ್ಮಹತ್ಯೆ ಸಂಬಂಧಿಸಿದಂತೆ ಶಿವಮೊಗ್ಗ ಎಸ್.ಪಿ. ನಿಖಿಲ್ ಬಿ. ಮಾಹಿತಿಯನ್ನು ನೀಡಿದ್ದಾರೆ.
ವಿಶ್ವ ಎಐ ಸಮ್ಮೇಳನದಲ್ಲಿ ಶಿವಮೊಗ್ಗ ಜಿಲ್ಲೆಯ ವಿದ್ಯಾರ್ಥಿಗಳ ಕರಾಮತ್ತು!
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೃತ ಸ್ವಾತಿ ಅವರ ತಾಯಿ ಈಗಾಗಲೇ ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನಲ್ಲಿ ಶಿವಮೊಗ್ಗದ ಮಾಳೂರು ಪೊಲೀಸ್ ಠಾಣೆಯ ಕ್ರೈಂ ಹೆಡ್ ಕಾನ್ಸ್ಟೇಬಲ್ ಮೋಹನ್ ಅವರ ಹೆಸರನ್ನು ಉಲ್ಲೇಖಿಸಲಾಗಿದೆ. ಪತಿ ಜಗದೀಶ್ ಸಾವನ್ನಪ್ಪಿದ ಬಳಿಕ ಮೋಹನ್ ಎಂಬುವವರು ಸ್ವಾತಿ ವಿರುದ್ಧ ಇಲ್ಲಸಲ್ಲದ ಅಪಪ್ರಚಾರ ಮಾಡಿ, ಮಾನಸಿಕ ಕಿರುಕುಳ ನೀಡಿದ್ದರು ಎಂದು ಆರೋಪಿಸಲಾಗಿದೆ.
ಈ ಪ್ರಕರಣದ ಸತ್ಯಾಸತ್ಯತೆಗಳನ್ನು ಹೊರತರಲು ಒಂದು ವಿಶೇಷ ತನಿಖಾ ತಂಡವನ್ನು ರಚಿಸಿದ್ದೇವೆ. ಮೃತರ ಕುಟುಂಬದ ದೂರಿನನ್ವಯ ಕಾನೂನು ಕ್ರಮ ಜರುಗಿಸಲಾಗುವುದು” ಎಂದು ಹೇಳಿದರು.
SP Orders Probe Special Team for Swathi Case

