SHIVAMOGGA NEWS TODAY

ಭದ್ರಾವತಿ: ರೈಲ್ವೆ ಹಳಿಗೆ ತಲೆಕೊಟ್ಟು ಆತ್ಮಹತ್ಯೆಗೆ ಯತ್ನಿಸಿದ ಯುವಕನ್ನು ರಕ್ಷಿಸಿದ ಪೊಲೀಸರು

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಭದ್ರಾವತಿ: ಪ್ರೇಮ ವೈಫಲ್ಯದಿಂದ ಮನನೊಂದು ರೈಲ್ವೆ ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ 18 ವರ್ಷದ ಯುವಕನನ್ನು ಭದ್ರಾವತಿ ನ್ಯೂಟೌನ್ ಪೊಲೀಸರು ರಕ್ಷಿಸಿದ್ದಾರೆ. 

ಫೆಬ್ರವರಿ 22ರ ಭಾನುವಾರ ರಾತ್ರಿ ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ನಾಗರಾಜ ಹೆಚ್.ಸಿ. ಮತ್ತು ಸಲೀಂ ಹೆಚ್.ಜಿ. ಅವರು ಎಂದಿನಂತೆ ರಾತ್ರಿ ಗಸ್ತು ತಿರುಗುತ್ತಿದ್ದರು. ಈ ವೇಳೆ ಹುತ್ತ ರೈಲ್ವೆ ಟ್ರ್ಯಾಕ್ ಬಳಿ ಹೋಗಿ ನೋಡಿದಾಗ ಯುವಕನೊಬ್ಬ ಹಳಿಯ ಮೇಲೆ ತಲೆಕೊಟ್ಟು ಮಲಗಿರುವುದು ಕಂಡುಬಂದಿದೆ.

ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು, ಹಳಿಯ ಮೇಲೆ ಮಲಗಿದ್ದ ಯುವಕನನ್ನು ಅಲ್ಲಿಂದ ಮೇಲೆತ್ತಿ ರಕ್ಷಿಸಿದ್ದಾರೆ. ಬಳಿಕ ಆತನನ್ನು ವಿಚಾರಿಸಿದಾಗ, ಪ್ರೇಮ ವೈಫಲ್ಯದ ಕಾರಣದಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿರುವುದಾಗಿ ತಿಳಿಸಿದ್ದಾನೆ

ಪೊಲೀಸರು ಆ ಯುವಕನಿಗೆ ಪೊಲಿಸರು ಬುದ್ದಿವಾದ ಹೇಳಿ. ಆತನ ಪೋಷಕರನ್ನು ಪೊಲೀಸ್ ಠಾಣೆಗೆ ಕರೆಸಿ, ಯುವಕನನ್ನು ಅವರೊಂದಿಗೆ ಮನೆಗೆ ಕಳುಹಿಸಿಕೊಟ್ಟಿದ್ದಾರೆ.

Bhadravati Cops Save Youth from Railway Track

Bhadravati Cops
Bhadravati Cops
shivamogga car decor sun control house
shivamogga car decor sun control house

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.