ನೆತ್ತಿ ಸುಡಲಿದೆ ಬಿಸಿಲು : ಶಿವಮೊಗ್ಗದಿಂದ ಬೆಂಗಳೂರುವರೆಗೂ ಬಿಸಿಲಿನ ಝಳ ಎಷ್ಟಿರಲಿದೆ ತಿಳಿಯಿರಿ

ಹಂಚಿಕೊಳ್ಳಿ
WhatsApp Facebook X Telegram
Karnataka Heatwave Warning Mercury to Hit 45°C
Karnataka Heatwave Warning Mercury to Hit 45°C

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಬೇಸಿಗೆಯ ಪ್ರಖರತೆ ಕಲ್ಪನೆಗೂ ಮೀರಿ ಇರಲಿದ್ದು, ಸಾರ್ವಜನಿಕರು ಬಿಸಿಲಿನ ಝಳಕ್ಕೆ ತತ್ತರಿಸುವ ಮುನ್ಸೂಚನೆ ಸಿಕ್ಕಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, ಈ ವರ್ಷ ವಾಡಿಕೆಗಿಂತ ಅತಿಯಾದ ಉಷ್ಣಾಂಶ ದಾಖಲಾಗಲಿದ್ದು, ಈಗಾಗಲೇ ಹಲವು ಜಿಲ್ಲೆಗಳಲ್ಲಿ ತಾಪಮಾನ ಏರಿಕೆ ಆರಂಭವಾಗಿದೆ. 

ಪ್ರಸ್ತುತ ಶಿವಮೊಗ್ಗ  ಉತ್ತರ ಕನ್ನಡ, ಹಾವೇರಿ ಹಾಗೂ ಬಾಗಲಕೋಟೆ ಸೇರಿದಂತೆ ರಾಜ್ಯದ ವಿವಿಧೆಡೆ ತಾಪಮಾನ ಏರುತ್ತಿದೆ. ಕಲಬುರಗಿಯಲ್ಲಿ ಈಗಾಗಲೇ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ತಲುಪಿದ್ದು, ರಾಜ್ಯದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಿನ ಸೆಕೆ ಕಂಡುಬರುತ್ತಿದೆ. ಆಕಾಶ ಮತ್ತು ವಾತಾವರಣದಲ್ಲಿನ ತೇವಾಂಶದ ಕೊರತೆಯು ಈ ಪರಿಸ್ಥಿತಿಯನ್ನು ಮತ್ತಷ್ಟು ಬಿಗಿಗೊಳಿಸಿದೆ. 

ಹವಾಮಾನ ತಜ್ಞ ಸಿ.ಎಸ್. ಪಾಟೀಲ ಅವರ ಮಾಹಿತಿಯಂತೆ, ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಬಿಸಿಲಿನ ತೀವ್ರತೆ ವಾಡಿಕೆಗಿಂತ 4-5 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ. ಲಾ ನಿನಾ ಪ್ರಭಾವ ಹಾಗೂ ಜಾಗತಿಕ ತಾಪಮಾನ ಏರಿಕೆಯಿಂದಾಗಿ ಉತ್ತರ ಒಳನಾಡಿನ ಜಿಲ್ಲೆಗಳಾದ ರಾಯಚೂರು, ಬಳ್ಳಾರಿ ಮತ್ತು ಕಲಬುರಗಿಯಲ್ಲಿ ತಾಪಮಾನವು 45 ಡಿಗ್ರಿ ಸೆಲ್ಸಿಯಸ್ ಮುಟ್ಟುವ ಭೀತಿ ಎದುರಾಗಿದೆ. ಇನ್ನು ಹಸಿರು ನಗರಿ ಬೆಂಗಳೂರಿನಲ್ಲಿಯೂ ಉಷ್ಣಾಂಶ 39 ಡಿಗ್ರಿ ಸೆಲ್ಸಿಯಸ್ ತಲುಪುವ ಅಂದಾಜಿದೆ.

ಬಿಸಿಲಿನ ತೀಕ್ಷ್ಣತೆ ಹೆಚ್ಚಿರುವ ಬೆಳಿಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ ಸಾರ್ವಜನಿಕರು ಅನಗತ್ಯವಾಗಿ ಹೊರಬರದಂತೆ ಸೂಚಿಸಲಾಗಿದೆ. ದೇಹದಲ್ಲಿ ನೀರಿನಂಶ ಕಾಪಾಡಿಕೊಳ್ಳಲು ಸತತವಾಗಿ ನೀರು ಕುಡಿಯುವುದು, ಸಡಿಲವಾದ ಹತ್ತಿ ಬಟ್ಟೆ ಧರಿಸುವುದು ಹಾಗೂ ಕೆಫೀನ್ ಮುಕ್ತ ಪಾನೀಯಗಳನ್ನು ಸೇವಿಸುವುದು ಉತ್ತಮ ಎಂದು ತಜ್ಞರು ಸಲಹೆ ನೀಡಿದ್ದಾರೆ.

Karnataka Heatwave Warning Mercury to Hit 45°C
Karnataka Heatwave Warning Mercury to Hit 45°C

Karnataka Heatwave Warning Mercury to Hit 45°C

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor