ಊರುಗಡೂರು ಕೇಸ್​,ಕುಟುಂಬಕ್ಕೆ 1 ಲಕ್ಷ ನೆರವು ನೀಡಿದ ಸಂಸದ ಬಿ.ವೈ. ರಾಘವೇಂದ್ರ; ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ

ಹಂಚಿಕೊಳ್ಳಿ
WhatsApp Facebook X Telegram
Mp byr Donates 1 Lakh to Sankeths Family
Mp byr Donates 1 Lakh to Sankeths Family

Mp byr ಶಿವಮೊಗ್ಗ: ನಗರದ ಊರುಗಡೂರಿನಲ್ಲಿ ಹತ್ಯೆಗೀಡಾದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್ ನಿವಾಸಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅವರು ಇಂದು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಮಗನನ್ನು ಕಳೆದುಕೊಂಡು ಕಂಗಾಲಾಗಿದ್ದ ಪೋಷಕರಿಗೆ ಧೈರ್ಯ ತುಂಬಿದ ಸಂಸದರು, ವೈಯಕ್ತಿಕವಾಗಿ ₹1 ಲಕ್ಷ ರೂಪಾಯಿಗಳ ಆರ್ಥಿಕ ನೆರವು ಹಸ್ತಂತರಿಸಿದರು. ಇದೇ ವೇಳೆ, ಮೃತ ಸಂಕೇತ್ ಅಕ್ಕನಿಗೆ ಉದ್ಯೋಗ ಕೊಡಿಸುವ ಭರವಸೆಯನ್ನೂ ನೀಡಿದರು.

ವಿಶ್ವ ಎಐ ಸಮ್ಮೇಳನದಲ್ಲಿ ಶಿವಮೊಗ್ಗ ಜಿಲ್ಲೆಯ ವಿದ್ಯಾರ್ಥಿಗಳ ಕರಾಮತ್ತು!

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದರು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕ್ಷುಲ್ಲಕ ಕಾರಣಕ್ಕೆ ಜಗಳ ಬಿಡಿಸಲು ಹೋದ ಅಮಾಯಕ ಬಾಲಕನನ್ನು ಬರ್ಬರವಾಗಿ ಕೊಲೆ ಮಾಡಿರುವುದು ಪೈಶಾಚಿಕ ಕೃತ್ಯ. ಸಣ್ಣ ವಯಸ್ಸಿನ ಹುಡುಗರನ್ನು ಮುಂದಿಟ್ಟುಕೊಂಡು ಪದೇ ಪದೇ ಇಂತಹ ರಾಕ್ಷಸಿ ಕೃತ್ಯಗಳನ್ನು ಎಸಗಲಾಗುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕಿಡಿಗೇಡಿಗಳಿಗೆ ತಾವು ಏನು ಮಾಡಿದರೂ ನಡೆಯುತ್ತದೆ ಎಂಬ ಧೋರಣೆ ಬಂದಿದೆ ಎಂದು ಅವರು ಆಕ್ರೋಶ ಹೊರಹಾಕಿದರು. 

ಶಿವಮೊಗ್ಗದಲ್ಲಿ ಬೈಕ್ ತ್ರಿಪಲ್ ರೈಡ್ ಹೋಗುವುದು, ಕೈಯಲ್ಲಿ ಕೋಲು ಹಿಡಿದು ಜನರನ್ನು ಹೆದರಿಸುವುದು ಸಾಮಾನ್ಯವಾಗುತ್ತಿದೆ. ಶಿರಾಳಕೊಪ್ಪದಲ್ಲೂ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆಯಾಗಿದೆ. ಸರ್ಕಾರದ ಓಲೈಕೆ ರಾಜಕಾರಣವೇ ಇಂತಹ ಘಟನೆಗಳಿಗೆ ಪ್ರೇರಣೆ ನೀಡುತ್ತಿದೆ. ಇನ್ನೆಷ್ಟು ಅಮಾಯಕರ ಬಲಿ ತೆಗೆದುಕೊಳ್ಳುತ್ತೀರಿ? ಎಂದು ನೇರವಾಗಿ ಪ್ರಶ್ನಿಸಿದರು. ಘಟನೆಯಲ್ಲಿ ಗಾಯಗೊಂಡಿರುವ ಮತ್ತೊಬ್ಬ ಬಾಲಕನ ಮನೆಗೂ ಭೇಟಿ ನೀಡಿದ ಅವರು ಕುಟುಂಬಕ್ಕೆ ಆತ್ಮಸ್ಥೈರ್ಯ ತುಂಬಿದರು. 

Mp byr Donates 1 Lakh to Sankeths Family

Mp byr Donates 1 Lakh to Sankeths Family
Mp byr Donates 1 Lakh to Sankeths Family
shivamogga car decor sun control house
shivamogga car decor sun control house
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor