SHIVAMOGGA NEWS TODAY

ಶಿವಮೊಗ್ಗ: ವೀಲಿಂಗ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್, ಬಿತ್ತು ದಂಡ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ : ಪೊಲೀಸರು ಸಂಚಾರಿ ನಿಯಮಗಳ ಬಗ್ಗೆ ಸಾಕಷ್ಟು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಡೆಸುತ್ತಿದ್ದರೂ ಸಹ ಕೆಲ ಯುವಕರು ಅದರ ಬಗ್ಗೆ ಕ್ಯಾರೆ ಎನ್ನುತ್ತಿಲ್ಲ. ಇದರಂತೆ ಇಬ್ಬರು ಯುವಕರು ತಮ್ಮ ಮೋಪೆಡ್ ವಾಹನದಲ್ಲಿ ವೀಲಿಂಗ್ ಮಾಡುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಅವರ ವಿರುದ್ಧ ಇದೀಗ ಶಿವಮೊಗ್ಗ ವೆಸ್ಟ್ ಟ್ರಾಫಿಕ್​​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಷ್ಟೇ ಅಲ್ಲದೆ ಅವರಿಗೆ ಟ್ರಾಫಿಕ್ ಪೊಲೀಸರು ದಂಡವನ್ನು ವಿಧಿಸಿದ್ದಾರೆ.

ಶಿವಮೊಗ್ಗ ಸೇರಿ 8 ಜಿಲ್ಲೆಗಳ ಕೇಳುಗರಿಗೆ ಸಿಹಿಸುದ್ದಿ! ಎಫ್‌ಎಂ 101.4 ಶೀಘ್ರದಲ್ಲಿ!

ಶಿವಮೊಗ್ಗ ನಗರದ ಬೈಪಾಸ್ ರಸ್ತೆಯ ಭಾರತ್ ಬೆಂಜ್ ಶೋ ರೂಂ ಎದುರಿನ ರಸ್ತೆಯಲ್ಲಿ ಇಬ್ಬರು ಯುವಕರು ತಮ್ಮ ಮೋಪೆಡ್ ಗಾಡಿಯಲ್ಲಿ ವೀಲಿಂಗ್ ಮಾಡಿದ್ದಾರೆ. ಅಷ್ಟೇ ಅಲ್ಲದೆ ವೀಲಿಂಗ್ ಮಾಡಿರುವ ವಿಡಿಯೋವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದ್ದಾರೆ. ಇದನ್ನು ಗಮನಿಸಿದ ಪೊಲೀಸರು ಇಬ್ಬರು ಯುವಕರ ಮೇಲೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಯುವಕರ ವೀಲಿಂಗ್ ವಿಡಿಯೋ ಹಾಗೂ ದಂಡ ವಿಧಿಸಿದ ವಿಡಿಯೋವನ್ನು ಪೊಲೀಸರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ನಿರ್ಲಕ್ಷ್ಯತನದ ಹಾಗೂ ದುಡುಕುತನದ ಚಾಲನೆಯು ಅಪಘಾತಕ್ಕೆ ಆಹ್ವಾನ ಕೊಟ್ಟಂತೆ ಎಂದು ಎಚ್ಚರಿಸಿದ್ದಾರೆ. ಟ್ರಾಫಿಕ್ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಿ, ಒಂದು ವೇಳೆ ನಿಯಮಗಳನ್ನು ನಿರ್ಲಕ್ಷಿಸಿದರೆ ದಂಡ ಬೀಳುತ್ತದೆ ಎಂಬ ಕಡಕ್ ಸಂದೇಶವನ್ನು ಪೊಲೀಸರು ಈ ಮೂಲಕ ರವಾನಿಸಿದ್ದಾರೆ.

Wheeling Video Viral
Wheeling Video Viral

Wheeling Video Viral Shivamogga Police Slap Fine

shivamogga car decor sun control house
shivamogga car decor sun control house

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.