SHIMOGA NEWS LIVE

ಭದ್ರಾವತಿ: ಮಹಿಳೆಗೆ ಚುಡಾಯಿಸಿ ಮನೆಯವರ ಮೇಲೆ ಹಲ್ಲೆ, 10 ಆರೋಪಿಗಳಿಗೆ ಕೋರ್ಟ್​ ಕೊಟ್ಟ ಶಿಕ್ಷೆ ಏನು ಗೊತ್ತಾ,

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಹೊಳೆಹೊನ್ನೂರು: ಸಾರ್ವಜನಿಕವಾಗಿ ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ, ಗುಂಪುಕಟ್ಟಿಕೊಂಡು ಮನೆಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ್ದ ಘಟನೆಗೆ ಸಂಬಂಧಿಸಿದಂತೆ ಭದ್ರಾವತಿ ಕೋರ್ಟ್ ಹತ್ತು ಮಂದಿಗೆ ತಲಾ ಒಂದು ವರ್ಷ, 8 ಸಾವಿರ ದಂಡ ವಿಧಿಸಿದೆ.  

ಶಿವಮೊಗ್ಗ: ಫುಟ್‌ಪಾತ್ ಅತಿಕ್ರಮಣ ತೆರವುಗೊಳಿಸಿದ ಮಹಾನಗರ ಪಾಲಿಕೆ ಮತ್ತು ಟ್ರಾಫಿಕ್ ಪೊಲೀಸರು.

ಭದ್ರಾವತಿ ಹಂಚಿನ ಸಿದ್ದಾಪುರದ ಘಟನೆ

2019ರ ಮಾರ್ಚ್ 8ರಂದು ನಡೆದ ಘಟನೆಯಿದು. ಶಿವರಾತ್ರಿ ಹಬ್ಬದ ದಿನ ಹಂಚಿನ ಸಿದ್ಧಾಪುರ ಗ್ರಾಮದ ನಿವಾಸಿ ದೇವಸ್ಥಾನಕ್ಕೆ ತೆರಳಿದ್ದರು. ಈ ವೇಳೆ ರುದ್ರೇಶ್ ಹಾಗೂ ಇತರರು ಸಂತ್ರಸ್ತ ಮಹಿಳೆಯನ್ನು ಅವಹೇಳನ ಮಾಡಿದ್ದರು. ಇದನ್ನ ಪ್ರಶ್ನಿಸಿದ್ದಕ್ಕೆ ಸಂತ್ರಸ್ತೆಯ ಮನೆಗೆ ನುಗ್ಗಿ ಅವಾಚ್ಯವಾಗಿ ನಿಂಧಿಸಿದ್ದರು. ಅಲ್ಲದೆ ಮೈಕೈ ಹಿಡಿದು ಎಳೆದಾಡಿ, ಸಿಸಿ ಕ್ಯಾಮೆರಾ ಹಾಗೂ ವಾಹನದ ಗ್ಲಾಸ್ ಪುಡಿಮಾಡಿದ್ದಷ್ಟೆ ಅಲ್ಲದೆ ಗಲಾಟೆಯನ್ನು ತಪ್ಪಿಸಲು ಬಂದವರ ಮೇಲೆಯು ಹಲ್ಲೆ ನಡೆಸಿದ್ದರು ಎಂದು ಸಂತ್ರಸ್ತೆ ಹೊಳೆಹೊನ್ನೂರು ಪೊಲೀಸ್ ಠಾಣೆಗೆ ಕಂಪ್ಲೆಂಟ್ ಮಾಡಿದ್ದರು.

ಹೊಳೆಹೊನ್ನೂರು ಪೊಲೀಸ್ ಸ್ಟೇಷನ್​ನಲ್ಲಿ ಕೇಸ್​

ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್​ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆ ನಡೆಸಿದ ಅಂದಿನ ತನಿಖಾಧಿಕಾರಿ ಎಎಸ್ಐ ಕೃಷ್ಣ ನಾಯ್ಕ್ ನ್ಯಾಯಾಲಯಕ್ಕೆ ಚಾರ್ಜ್​ಶೀಟ್​ ಸಲ್ಲಿಸಿದ್ದರು.

ಭದ್ರಾವತಿಯ 1ನೇ ಎ.ಸಿ.ಜೆ ಮತ್ತು ಜೆಎಂಎಫ್ ಸಿ ನ್ಯಾಯಾಲಯದಲ್ಲಿ ವಿಚಾರಣೆ

ಭದ್ರಾವತಿಯ 1ನೇ ಎ.ಸಿ.ಜೆ ಮತ್ತು ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಕೇಸ್​ನ ವಿಚಾರಣೆ ನಡೆಸಿದ ನ್ಯಾ. ರವಿಕುಮಾರ್ ವಿ. ಅಂತಿಮವಾಗಿ ಪ್ರಕರಣದಲ್ಲಿ ಎಲ್ಲಾ ಹತ್ತು ಮಂದಿ ಆರೋಪಿಗಳನ್ನ ತಪ್ಪಿತಸ್ತರೆಂದು ತೀರ್ಪು ನೀಡಿದರು. ಅಲ್ಲದೆ ತಲಾ 1 ವರ್ಷ ಜೈಲು ಶಿಕ್ಷೆ ಹಾಗೂ ತಲಾ 8000 ರೂಪಾಯಿ ದಂಡ ವಿಧಿಸಿದ್ದಾರೆ. ದಂಡದ ಮೊತ್ತದ ಪೈಕಿ ಒಟ್ಟು 80,000 ರೂಪಾಯಿಗಳನ್ನು ಸಂತ್ರಸ್ತೆಗೆ ಪರಿಹಾರವಾಗಿ ನೀಡಲು ಸೂಚಿಸಿದ್ದಾರೆ. ಈ ಪ್ರಕರಣದಲ್ಲಿ ಕೇಸ್​ನ ಪರವಾಗಿ, ಅಪರ ಸರ್ಕಾರಿ ಅಭಿಯೋಜಕ ತಿಪ್ಪೇಶ್ ರಾವ್ ಅವರು ವಾದ ಮಂಡಿಸಿದ್ದರು.

Bhadravati Court Sentences 10 Individuals to Jail

Bhadravati Court Unidentified Man Soraba Ghana Detains Bhadravathi Arson Anandapura Shivamogga Shivaratri Rules Swathantryada Ota Court Orders Walk-in Interview Shivamogga Court KFD Fatality Shivamogga Round up
Bhadravati Court

Bhadravati Court Sentences 10 Individuals to Jail

shivamogga car decor sun control house
shivamogga car decor sun control house

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.