ಸಿಗಂದೂರು ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ, ಕಾರಣವೇನು

ಹಂಚಿಕೊಳ್ಳಿ
WhatsApp Facebook X Telegram
Sharavathi Victims Protest Farmers Block NH at Sigandur
Sharavathi Victims Protest Farmers Block NH at Sigandur

Sharavathi Victims Protest ಶಿವಮೊಗ್ಗ: ದಶಕಗಳ ಕಾಲದ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಹಾಗೂ ಅರಣ್ಯ ಭೂಮಿ ಸಾಗುವಳಿದಾರರ ಬೇಡಿಕೆಗಳಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಒತ್ತಾಯಿಸಿ ಇಂದು ಮಲೆನಾಡು ರೈತ  ಹೋರಾಟ ಸಮಿತಿ ವತಿಯಿಂದ ಬೃಹತ್ ಚಳವಳಿ ನಡೆಸಲಾಯಿತು. ಸಮಿತಿಯ ಜಿಲ್ಲಾ ಸಂಚಾಲಕ ತೀ.ನ. ಶ್ರೀನಿವಾಸ್ ನೇತೃತ್ವದಲ್ಲಿ ಸಿಗಂದೂರು ಸೇತುವೆ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ನೂರಾರು ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. 

ಶಿವಮೊಗ್ಗದಲ್ಲಿ ಬೃಹತ್ ಜಿಲ್ಲಾ ಮಟ್ಟದ ಉದ್ಯೋಗ ಮೇಳ: 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗಿ, ಯಾವಾಗ

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನೂರಾರು ಸಾಗುವಳಿದಾರರು, ಕೆಪಿಸಿ ಭೂಮಿ ನಂಬಿ ಬದುಕುತ್ತಿರುವ ತಮಗೆ ಕೂಡಲೇ ಹಕ್ಕುಪತ್ರ ನೀಡಬೇಕೆಂದು ರಾಜ್ಯ ಸರ್ಕಾರವನ್ನು ಬಲವಾಗಿ ಆಗ್ರಹಿಸಿದರು. 1964 ರಿಂದಲೂ ಮುಳುಗಡೆ ಸಂತ್ರಸ್ತರು ಅನುಭವಿಸುತ್ತಿರುವ ನೋವನ್ನು ಆಲಿಸುವಲ್ಲಿ ಶಾಸಕಾಂಗ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಸಂಚಾಲಕ ತೀ.ನ. ಶ್ರೀನಿವಾಸ್, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರು ಒಂದು ವರ್ಷದೊಳಗೆ ಹಕ್ಕುಪತ್ರ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಈಗ ಮೂರು ವರ್ಷ ಕಳೆದರೂ ಈ ಬಗ್ಗೆ ಚಕಾರವೆತ್ತುತ್ತಿಲ್ಲ. ಮಲೆನಾಡ ರೈತರ ಸಂಕಷ್ಟದ ವಿಷಯದಲ್ಲಿ ಸರ್ಕಾರಗಳು ತೋರುತ್ತಿರುವ ನಿರ್ಲಕ್ಷ್ಯ ಖಂಡನೀಯ ಎಂದರು.

ಬಡವರ ಧ್ವನಿಯಾಗಬೇಕಾದ ಜನಪ್ರತಿನಿಧಿಗಳು ಸಮಸ್ಯೆ ಬಗೆಹರಿಸುವ ಬದಲು ಕೋರ್ಟ್‌ಗೆ ಹೋಗಲು ಸೂಚಿಸುತ್ತಿರುವುದು ಸರಿಯಲ್ಲ. ರೈತರೇ ಕೋರ್ಟ್‌ಗೆ ಹೋಗುವುದಾದರೆ ಜನಪ್ರತಿನಿಧಿಗಳು ಯಾಕೆ ಬೇಕು? ಅವರು ಕೂಡಲೇ ರಾಜೀನಾಮೆ ನೀಡಲಿ ಎಂದು ಶ್ರೀನಿವಾಸ್ ಸವಾಲು ಹಾಕಿದರು. ಒಂದು ವೇಳೆ ಸಮಸ್ಯೆ ಶೀಘ್ರವಾಗಿ ಇತ್ಯರ್ಥವಾಗದಿದ್ದರೆ ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಸಚಿವರ ಕಚೇರಿಗಳಿಗೆ ಮುತ್ತಿಗೆ ಹಾಕುವುದಾಗಿ ಅವರು ಎಚ್ಚರಿಕೆ ನೀಡಿದರು.

Sharavathi Victims Protest Farmers Block NH at Sigandur

Sharavathi Victims Protest Farmers Block NH at Sigandur
Sharavathi Victims Protest Farmers Block NH at Sigandur
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor