ಶಿಕಾರಿಪುರ: ರಂಜಾನ್ ದೇಣಿಗೆ ವಿಚಾರವಾಗಿ ಎರಡು ಗುಂಪುಗಳ ನಡುವೆ ಕಿರಿಕ್​​ 10 ಮಂದಿ ಅರೆಸ್ಟ್

ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ಪಟ್ಟಣದ ಗಗ್ರಿ ಪ್ರದೇಶದಲ್ಲಿ ಭಾನುವಾರ ರಂಜಾನ್ ಹಬ್ಬದ ದೇಣಿಗೆ ಸಂಗ್ರಹಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಸಂಘರ್ಷ ಏರ್ಪಟ್ಟಿದೆ. ಈ ವೇಳೆ ನಡೆದ ಕಲ್ಲು ತೂರಾಟದಿಂದಾಗಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದ್ದಲ್ಲದೆ, ಶಿಕಾರಿಪುರ-ಶಿರಾಳಕೊಪ್ಪ ಮುಖ್ಯ ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡ್ಡಿಯುಂಟಾಯಿತು. 

ಶಿವಮೊಗ್ಗ ಮಾರಿಕಾಂಬಾ ಜಾತ್ರೆ ಆರಂಭ: ಭಕ್ತಸಮೂಹಕ್ಕೆ ಮಾರವ್ವನ ಮೊದಲ ದರ್ಶನ

ಘಟನೆಯ ಹಿನ್ನೆಲೆ 

ಮುಂಬರುವ ರಂಜಾನ್ ಹಬ್ಬದ ಆಚರಣೆಗಾಗಿ ಮಸೀದಿಯಲ್ಲಿ ನಡೆದ ಸಭೆಯಲ್ಲಿ ಪ್ರತಿ ಕುಟುಂಬದಿಂದ ಕಡ್ಡಾಯವಾಗಿ 1,000 ರೂ. ದೇಣಿಗೆ ಸಂಗ್ರಹಿಸಲು ನಿರ್ಧರಿಸಲಾಗಿತ್ತು. ಆದರೆ, ಈ ಮೊತ್ತದ ಸಂಗ್ರಹಕ್ಕೆ ಮತ್ತೊಂದು ಗುಂಪು ತೀವ್ರ ವಿರೋಧ ವ್ಯಕ್ತಪಡಿಸಿತು. ಈ ವಾಗ್ವಾದವು ವಿಕೋಪಕ್ಕೆ ತಿರುಗಿ, ಎರಡೂ ಗುಂಪುಗಳ ಸದಸ್ಯರು ಪರಸ್ಪರ ಕಲ್ಲು ಮತ್ತು ದೊಣ್ಣೆಗಳಿಂದ ಹಲ್ಲೆ ನಡೆಸಲು ಮುಂದಾದರು.

ಮುಖ್ಯ ರಸ್ತೆಯಲ್ಲೇ ಈ ಕಲ್ಲು ತೂರಾಟ ನಡೆದಿದ್ದರಿಂದ ರಸ್ತೆ ಸಂಚರಿಸುತ್ತಿದ್ದ ಸಾರ್ವಜನಿಕರು ಭಯಭೀತರಾದರು. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಶಿಕಾರಿಪುರ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದು ಗುಂಪುಗಳನ್ನು ಚದುರಿಸಿದರು. 

ಈ ಗಲಭೆಗೆ ಸಂಬಂಧಿಸಿದಂತೆ ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್‌ಐಆರ್ ದಾಖಲಾಗಿದ್ದು, ಘಟನೆಯಲ್ಲಿ ಭಾಗಿಯಾದ ಆರೋಪದ ಮೇಲೆ 10 ಜನರನ್ನು ಬಂಧಿಸಲಾಗಿದೆ. 

Shikaripura Stones Pelted Over Donation Dispute

Shikaripura Laborer Dies Shivamogga Court Bhadravati Court Unidentified Man Soraba Ghana Detains Bhadravathi Arson Anandapura Shivamogga Shivaratri Rules Swathantryada Ota Court Orders Walk-in Interview Shivamogga Court KFD Fatality Shivamogga Round up
Shikaripura
shivamogga car decor sun control house
shivamogga car decor sun control house