ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಗೆ ಕಿರುಕುಳ ನೀಡಿದ ಆಸಾಮಿಯನ್ನ ಅಕ್ಕಪಡೆ ಹಿಡಿದು ಕೇಸ್ ಹಾಕಿದೆ. ಈ ಬಗ್ಗೆ ಎಸ್ಪಿ ನಿಖಿಲ್ ಬಿ ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಅಕೌಂಟ್ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.

ಶಿವಮೊಗ್ಗ ಎಸ್ಪಿ ಎಕ್ಸ್ ಅಕೌಂಟ್ನಲ್ಲಿ ಲಭ್ಯವಾಗಿರುವ ಮಾಹಿತಿ ಪ್ರಕಾರ, ಬಸ್ ನಿಲ್ದಾಣದಲ್ಲಿ ಗಸ್ತು ತಿರುಗುತ್ತಿದ್ದ ಅಕ್ಕಪಡೆಗೆ ಅಲ್ಲಿ ಯುವತಿಯೊಬ್ಬರು ಅಳುತ್ತಿರುವುದು ಕಾಣಿಸಿದೆ. ತಡಮಾಡದೇ ಆಕೆಯ ಬಳಿ ತೆರಳಿದ ಅಕ್ಕಪಡೆ ಏನಾಯ್ತು! ಯಾಕೆ ಅಳುತ್ತಿದ್ದೀರಿ ಅಂಥಾ ವಿಚಾರಿಸಿದ್ದಾರೆ. ಈ ವೇಳೆ ಆಕೆಗೆ ಯುವಕನೊಬ್ಬ ಕಿರುಕುಳ ನೀಡುತ್ತಿರುವ ವಿಚಾರ ತಿಳಿದು ಬಂದಿದೆ. ಆ ತಕ್ಷಣವೇ ಕಾರ್ಯಾಚರಣೆ ಆರಂಭಿಸಿದ ಅಕ್ಕಪಡೆ ಸಿಬ್ಬಂದಿ ಯುವತಿಗೆ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಹುಡುಕಿ ವಶಕ್ಕೆ ಪಡೆದಿದೆ. ಅಲ್ಲದೆ ದೊಡ್ಡಪೇಟೆ ಪೊಲೀಸ್ ಠಾಣೆಗೆ ಕರೆತಂದು ಆತನ ವಿರುದ್ಧ ಕೇಸ್ ದಾಖಲಿಸಿದ್ದಾರೆ.
ಶಿವಮೊಗ್ಗ: ರಾಗಿಗುಡ್ಡದ 15 ವರ್ಷದ ಬಾಲಕ ನಾಪತ್ತೆ; ಸುಳಿವು ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡಿ

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.