ಶಿವಮೊಗ್ಗ: ನಗರದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿ, ಗಾಂಜಾವನ್ನು ವಶಪಡಿಕೊಂಡಿದ್ದಾರೆ.
ಶಿವಮೊಗ್ಗ, ದಾವಣಗೆರೆ ಸೇರಿದಂತೆ ರಾಜ್ಯದ ಪ್ರಮುಖ ಎಪಿಎಂಸಿಗಳಲ್ಲಿ ಅಡಿಕೆ ದರ ಹೀಗಿದೆ
ಘಟನೆಯ ವಿವರ
ಮಾರ್ಚ್ 01 ರಂದು ಸಂಜೆ ಇಲಿಯಾಜ್ ನಗರದ ಮೌಂಟ್ ಹಿರಾ ಶಾಲೆಯ ಸಮೀಪವಿರುವ ತುಂಗಾ ಚಾನಲ್ ಬಳಿ ಸ್ಕೂಟಿಯಲ್ಲಿ ಗಾಂಜಾ ಮಾರಾಟ ನಡೆಯುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಪಿಎಸ್ಐ ನಾರಾಯಣ ಮಧುಗಿರಿ ಮತ್ತು ತಂಡದವರು ಸ್ಥಳಕ್ಕೆ ತೆರಳಿ ದಾಳಿ ನಡೆಸಿದ್ದಾರೆ. ಈ ವೇಳೆ 2 ಕೆಜಿ 66 ಗ್ರಾಂ ತೂಕದ ಒಣ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ್ದ ಸ್ಕೂಟಿಯನ್ನುಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಸವಾಯಿಪಾಳ್ಯದ ಮೊಹಮ್ಮದ್ ಹಮ್ಮದ್ ಅಜರುದ್ದೀನ್ ಅಲಿಯಾಸ್ ಅಜರ್ (28) ಎಂಬಾತನನ್ನು ಬಂಧಿಸಲಾಗಿದೆ. ಈತ ವೃತ್ತಿಯಲ್ಲಿ ಬಟ್ಟೆ ವ್ಯಾಪಾರಿಯಾಗಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾನೆ. ಆದರೆ, ಎರಡನೇ ಆರೋಪಿ ವಸೀಂ ಅಕ್ರಂ ಅಲಿಯಾಸ್ ಸೈಲೆಂಟ್ ಎಂಬಾತ ಸ್ಥಳದಿಂದ ಪರಾರಿಯಾಗಿದ್ದು, ಆತನ ಪತ್ತೆಗಾಗಿ ಪೊಲೀಸರು ವಿಶೇಷ ತಂಡವನ್ನು ರಚಿಸಿದ್ದಾರೆ.
ಬಂಧಿತ ಆರೋಪಿ ಅಜರ್ನ ಮೇಲೆ ಈ ಹಿಂದೆ ದೊಡ್ಡಪೇಟೆ ಮತ್ತು ತುಂಗಾನಗರ ಪೊಲೀಸ್ ಠಾಣೆಗಳಲ್ಲಿ ಕೊಲೆ ಯತ್ನ (Section 307), ದರೋಡೆ ಸಂಚು, ಮಹಿಳೆಯರ ಮೇಲೆ ದೌರ್ಜನ್ಯ ಹಾಗೂ ಎನ್‌ಡಿಪಿಎಸ್ ಕಾಯ್ದೆಯಡಿ ಒಟ್ಟು 6 ಪ್ರಕರಣಗಳು ದಾಖಲಾಗಿವೆ.
Drug Peddler Arrested in Shimoga

