16 ವರ್ಷದೊಳಗಿನವರಿಗೆ ಸಾಮಾಜಿಕ ಜಾಲತಾಣ ನಿಷೇಧಿಸಲು ಬಜೆಟ್‌ನಲ್ಲಿ ನಿರ್ಧಾರ

ಹಂಚಿಕೊಳ್ಳಿ
WhatsApp Facebook X Telegram
Karnataka Budget Social Media Banned for Children (1)
Karnataka Budget Social Media Banned for Children (1)

ಶಿವಮೊಗ್ಗ: ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದ ಮಕ್ಕಳ ಮೇಲೆ ಉಂಟಾಗುತ್ತಿರುವ ಅಡ್ಡಪರಿಣಾಮಗಳನ್ನು ತಡೆಗಟ್ಟಲು ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 2026-27ನೇ ಸಾಲಿನ ಬಜೆಟ್‌ನಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆಯನ್ನು ನಿಷೇಧಿಸುವ ಪ್ರಸ್ತಾವನೆಯನ್ನು ಮಂಡಿಸಿದ್ದಾರೆ. 

ಬಣ್ಣದ ಲೋಕದಲ್ಲಿ ಮಿಂದೆದ್ದ ಶಿವಮೊಗ್ಗ: ಗೋಪಿ ವೃತ್ತದಲ್ಲಿ ಹೋಳಿ ಹಬ್ಬದ ಸಂಭ್ರಮ ಹೇಗಿತ್ತು?

ಬಜೆಟ್ ಭಾಷಣದಲ್ಲಿ ಈ ಬಗ್ಗೆ ಪ್ರಸ್ತಾಪಿಸಿರುವ ಮುಖ್ಯಮಂತ್ರಿಗಳು, ಮಕ್ಕಳ ಮಾನಸಿಕ ಆರೋಗ್ಯ, ವಿದ್ಯಾಭ್ಯಾಸ ಮತ್ತು ಸರ್ವಾಂಗೀಣ ಏಳಿಗೆಯ ದೃಷ್ಟಿಯಿಂದ ಈ ಕಠಿಣ ತೀರ್ಮಾನ ಅನಿವಾರ್ಯವಾಗಿದೆ ಎಂದು ತಿಳಿಸಿದ್ದಾರೆ. ಮೊಬೈಲ್ ಗೀಳು ಮಕ್ಕಳಲ್ಲಿ ಏಕಾಗ್ರತೆಯ ಕೊರತೆ, ಸೈಬರ್ ಅಪರಾಧಗಳಿಗೆ ಬಲಿಯಾಗುವುದು ಮತ್ತು ಸಾಮಾಜಿಕವಾಗಿ ದೂರವಾಗುವಂತಹ ಸಮಸ್ಯೆಗಳನ್ನು ಸೃಷ್ಟಿಸುತ್ತಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಹಿತರಕ್ಷಣೆ ಸರ್ಕಾರದ ಆದ್ಯತೆಯಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. 

ಕೇಂದ್ರ ಸರ್ಕಾರದ ಇತ್ತೀಚಿನ ಆರ್ಥಿಕ ಸಮೀಕ್ಷಾ ವರದಿಯಲ್ಲೂ ಸಹ ಮಕ್ಕಳಿಗೆ ಮೊಬೈಲ್ ಬಳಕೆಯನ್ನು ನಿರ್ಬಂಧಿಸುವ ಬಗ್ಗೆ ಗಂಭೀರವಾಗಿ ಪ್ರಸ್ತಾಪಿಸಲಾಗಿತ್ತು. ಈಗ ಕರ್ನಾಟಕ ಸರ್ಕಾರವು ಅದನ್ನು ಜಾರಿಗೆ ತರಲು ಮುಂದಾಗಿರುವುದು ಸಾರ್ವಜನಿಕ ವಲಯದಲ್ಲಿ, ವಿಶೇಷವಾಗಿ ಪೋಷಕರು ಮತ್ತು ಶಿಕ್ಷಣ ತಜ್ಞರಿಂದ ಮೆಚ್ಚುಗೆಗೆ ಪಾತ್ರವಾಗಿದೆ. 

Karnataka Budget Social Media Banned for Children

Karnataka Budget Social Media Banned for Children (1)
Karnataka Budget Social Media Banned for Children
shivamogga car decor sun control house
shivamogga car decor sun control house
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor