ಸಾಗರ: ಸಾಗರ ನಗರದ ಯುವಕನೋರ್ವ ರೈಲು ಹಳಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಮಧ್ಯಾಹ್ನ ಸಂಭವಿಸಿದೆ. ಮೃತ ದುರ್ದೈವಿಯನ್ನು ಸ್ಥಳಿಯ ನಿವಾಸಿ ನಿತಿನ್ (26) ಎಂದು ಗುರುತಿಸಲಾಗಿದೆ.
ಶಿವಮೊಗ್ಗ, ಸಾಗರ, ಶಿರಸಿ, ಕೊಪ್ಪ, ಚನ್ನಗಿರಿ ಅಡಿಕೆ ರೇಟಿನ ವಿವರ! ತುಂಬಾ ಬದಲಾಗಿದೆ
ಲಭ್ಯವಿರುವ ಮಾಹಿತಿಯಂತೆ, ಮೃತ ನಿತಿನ್ ಸಾಗರದ ದಿನಸಿ ವರ್ತಕರಾದ ಆರ್.ಕೆ. ನಾಗರಾಜ್ ಅವರ ಪುತ್ರನಾಗಿದ್ದಾರೆ. ಇಂದು ಮಧ್ಯಾಹ್ನ ಸುಮಾರು 1 ಗಂಟೆಯ ವೇಳೆಗೆ ಮೈಸೂರಿನಿಂದ ತಾಳಗುಪ್ಪಕ್ಕೆ ತೆರಳುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಹಾಗೂ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುವಕನ ಈ ನಿರ್ಧಾರಕ್ಕೆ ನಿಖರವಾದ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರೆಬೇಕಿದೆ.
Railway Suicide 26 Year Old Nitin Dies


Related News
🔔 Breaking News Alerts
ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.