ಶಿವಮೊಗ್ಗ: ನಗರದ ಆಲ್ಕೊಳ ವೃತ್ತದ ಬಳಿ ಚಲಿಸುತ್ತಿದ್ದ ರೆನಾಲ್ಟ್ ಡಸ್ಟರ್ ಕಾರಿನ ಇಂಜಿನ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಅದೃಷ್ಟವಶಾತ್, ಚಾಲಕನ ಜಾಗರೂಕತೆಯಿಂದಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ರಾಜ್ಯ ಬಜೆಟ್, ಶಿವಮೊಗ್ಗ ಜಿಲ್ಲೆಗೆ ಸಿಕ್ಕಿದ್ದೇನು
ಘಟನೆಯ ವಿವರ:
ಗಾಡಿಕೊಪ್ಪ ಕಡೆಯಿಂದ ಬಸ್ ನಿಲ್ದಾಣದ ಕಡೆಗೆ ಚಲಿಸುತ್ತಿದ್ದ ಕಾರಿನ ಇಂಜಿನ್ ಭಾಗದಲ್ಲಿ ಏಕಾಏಕಿ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ. ಕೂಡಲೇ ಎಚ್ಚೆತ್ತ ಚಾಲಕ ವಾಹನವನ್ನು ನಿಲ್ಲಿಸಿದ್ದಾರೆ. ಬೆಂಕಿ ಹೊತ್ತಿಕೊಂಡ ಸ್ಥಳದ ಸಮೀಪದಲ್ಲೇ ಪೆಟ್ರೋಲ್ ಬಂಕ್ ಇದ್ದಿದ್ದರಿಂದ, ಅಲ್ಲಿನ ಸಿಬ್ಬಂದಿ ಹಾಗೂ ಸ್ಥಳೀಯರು ತಕ್ಷಣವೇ ಫೈರ್ ಎಕ್ಸ್ಟಿಂಗ್ವಿಷರ್ ಬಳಸಿ ಬೆಂಕಿಯನ್ನು ನಂದಿಸಿದ್ದಾರೆ.
Duster Car Catches Fire Near Alkola Circle Shimoga


Related News
🔔 Breaking News Alerts
ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್ಸ್ಕ್ರೈಬ್ ಮಾಡಿ.