ಶಿವಮೊಗ್ಗ : ಬೆಂಕಿನಗರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಗರದ ಬಿಟಿವಿ ವರದಿಗಾರರಾಗಿದ್ದ ಅನಿಲ್ (45) ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ರಾಜ್ಯ ಬಜೆಟ್, ಶಿವಮೊಗ್ಗ ಜಿಲ್ಲೆಗೆ ಸಿಕ್ಕಿದ್ದೇನು
ಅನಿಲ್ ಅವರು ತಮ್ಮ ಬೈಕ್ನಲ್ಲಿ ತೆರಳುತ್ತಿದ್ದಾಗ ಎದುರಿನಿಂದ ಬಂದ ಸ್ಕೂಟಿಯೊಂದು ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಅಪಘಾತ ದೃಶ್ಯಗಳು ಸಮೀಪದ ಸಿಸಿ ಟಿವಿಯಲ್ಲಿ ಸೆರೆಯಾಗಿವೆ. ರಸ್ತೆಯಲ್ಲಿ ನಿಲ್ಲಿಸಿದ್ದ ಮತ್ತೊಂದು ಸ್ಕೂಟಿಯನ್ನು ತಪ್ಪಿಸಲು ಹೋಗಿ ನಿಯಂತ್ರಣ ಸಿಗದೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಡಿಕ್ಕಿಯ ರಭಸಕ್ಕೆ ನೆಲಕ್ಕೆ ಬಿದ್ದು ಗಾಯಗೊಂಡಿದ್ದ ಅನಿಲ್ ಅವರನ್ನು ಸ್ಥಳೀಯರು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಪರೀಕ್ಷೆ ನಡೆಸಿದ್ದ ವೈದ್ಯರು ಅನಿಲ್ ಅವರ ಹೊಟ್ಟೆಯ ಒಳಭಾಗದಲ್ಲಿ ತೀವ್ರ ರಕ್ತಸ್ರಾವವಾಗಿದ್ದು, ಲಘು ಹೃದಯಸ್ತಂಭನ ಸಂಭವಿಸಿದೆ ಎಂದು ತಿಳಿಸಿದ್ದರು. ಆದರೆ ಇಂದು ದುರಾದೃಷ್ಟವಶಾತ್ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ.
ಅನಿಲ್ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಘಟಕ ಹಾಗೂ ಪ್ರೆಸ್ ಟ್ರಸ್ಟ್ ತೀವ್ರ ಸಂತಾಪ ಸೂಚಿಸಿವೆ.
BTV Reporter Anil Dies in Road Accident


