ಬ್ಯೂಟಿ ಪಾರ್ಲರ್​ ಕೋರ್ಸ್​​ ಮಾಡ್ಬೇಕು ಅಂತಿದ್ದೀರ, ಹಾಗಾದ್ರೆ ಇಲ್ಲಿದೆ ಸುವರ್ಣಾವಕಾಶ

Published: 10 ಮಾರ್ಚ್ 2026, 2:31 ಅಪರಾಹ್ನ • 1 min read

Beauty Parlour Training ಶಿವಮೊಗ್ಗ: ಸ್ವಂತ ಉದ್ಯೋಗ ಮಾಡುವ ಕನಸು ಹೊತ್ತಿರುವ ನಿರುದ್ಯೋಗಿ ಯುವತಿಯರು ಹಾಗೂ ಮಹಿಳೆಯರಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯು (RSETI) 35 ದಿನಗಳ ಉಚಿತ ಬ್ಯೂಟಿ ಪಾರ್ಲರ್ ತರಬೇತಿ ಶಿಬಿರವನ್ನು ಆಯೋಜಿಸಿದೆ.

ಶಿವಮೊಗ್ಗ: ಬೈಕ್​ ಅಪಘಾತ ,ಬಿಟಿವಿ ವರದಿಗಾರ ಅನಿಲ್ ನಿಧನ

ಏಪ್ರಿಲ್ ಮೊದಲ ವಾರದಿಂದ ಈ ತರಬೇತಿ ಆರಂಭವಾಗಲಿದ್ದು, ಕರ್ನಾಟಕದ ಯಾವುದೇ ಜಿಲ್ಲೆಯ 18 ರಿಂದ 45 ವರ್ಷ ವಯೋಮಿತಿಯ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದೆ. ಗ್ರಾಮೀಣ ಭಾಗದ ಬಿಪಿಎಲ್ (BPL) ಕಾರ್ಡ್ ಹೊಂದಿರುವ ಅಭ್ಯರ್ಥಿಗಳಿಗೆ ಈ ಯೋಜನೆಯಲ್ಲಿ ಮೊದಲ ಆದ್ಯತೆ ನೀಡಲಾಗುತ್ತದೆ. 

ಆಯ್ಕೆಯಾದ ಅಭ್ಯರ್ಥಿಗಳಿಗೆ 35 ದಿನಗಳ ಕಾಲ ತರಬೇತಿ, ಊಟ ಹಾಗೂ ವಸತಿ ಸೌಲಭ್ಯಗಳನ್ನು ಸಂಪೂರ್ಣ ಉಚಿತವಾಗಿ ನೀಡಲಾಗುತ್ತದೆ. ಅಭ್ಯರ್ಥಿಗಳು ಕನ್ನಡ ಓದಲು ಮತ್ತು ಬರೆಯಲು ಶಕ್ತರಾಗಿರಬೇಕು. ಯಶಸ್ವಿಯಾಗಿ ತರಬೇತಿ ಪೂರ್ಣಗೊಳಿಸಿದವರಿಗೆ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಮಾನ್ಯತೆ ಪಡೆದ ಪ್ರಮಾಣಪತ್ರವನ್ನು ವಿತರಿಸಲಾಗುವುದು, ಇದು ಭವಿಷ್ಯದಲ್ಲಿ ಬ್ಯಾಂಕ್ ಸಾಲ ಪಡೆಯಲು ಸಹಕಾರಿಯಾಗಲಿದೆ. 

Beauty Parlour Training ಅರ್ಜಿ ಸಲ್ಲಿಕೆ ಹೇಗೆ?

ಆಸಕ್ತರು ಮಾರ್ಚ್ 23 ರಂದು ಬೆಳಿಗ್ಗೆ 10:00 ಗಂಟೆಗೆ ಹೊಸಕೋಟೆ ತಾಲೂಕಿನ ಸೊಣ್ಣಹಳ್ಳಿಪುರದಲ್ಲಿರುವ ಸಂಸ್ಥೆಗೆ ನೇರವಾಗಿ ತಮ್ಮ ವಿದ್ಯಾರ್ಹತೆ ಮತ್ತು ವಿಳಾಸದ ದಾಖಲೆಗಳೊಂದಿಗೆ ಹಾಜರಾಗಬಹುದು. ಒಂದು ವೇಳೆ ನೇರವಾಗಿ ಹಾಜರಾಗಲು ಸಾಧ್ಯವಾಗದಿದ್ದರೆ, ಮಾರ್ಚ್ 23ರ ಒಳಗಾಗಿ ಕೆಳಗಿನ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಹೆಸರು ನೋಂದಾಯಿಸಿಕೊಳ್ಳಬಹುದು.

ಸಂಪರ್ಕಿಸಬೇಕಾದ ಸಂಖ್ಯೆಗಳು: 8970476050, 6363139123, 9591514154, 9686248369, 9505894247.

Beauty Parlour Training by Canara Bank RSETI

Beauty Parlour Training by Canara Bank RSETI
Beauty Parlour Training by Canara Bank RSETI

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY

Prathapa thirthahalli

Senior Journalist | Malenadu Today
✓ Verified Journalist