ಮಲೆನಾಡು ಟುಡೆ ಸುದ್ದಿ / ಬೆಂಗಳೂರು / ವಿಧಾನಸಭಾ ಕಲಾಪದಲ್ಲಿ ಇಂದು ಗೃಹಸಚಿವ ಡಾ.ಜಿ.ಪರಮೇಶ್ವರ್, ಕಳೆದ ನಾಲ್ಕೈದು ವರ್ಷಗಳಿಂದ, ವಿಶೇಷವಾಗಿ ಪಿಎಸ್‌ಐ ಹಗರಣದ ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಂಡಿತ್ತು.ಆದರೆ, ನಮ್ಮ ಸರ್ಕಾರವು ಕಳೆದ ಒಂದೂವರೆ ವರ್ಷದಲ್ಲಿ 900 ಪಿಎಸ್‌ಐಗಳನ್ನು ನೇಮಕ ಮಾಡಿಕೊಂಡಿದೆ ಎಂದು ತಿಳಿಸಿದ್ದಾರೆ.

ಶಿವಮೊಗ್ಗ : ಹೋಳಿ ಹಬ್ಬ & ಶೆಡ್ ಕೇಸ್! 10 ಮಂದಿ ಅರೆಸ್ಟ್!
ವಿಧಾನಸಭೆಯಲ್ಲಿ ಮಾತನಾಡಿದ ಅವರು, ಸದ್ಯ 545 ಜನರ ಒಂದು ಬ್ಯಾಚ್ ಶೀಘ್ರವೇ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲಿದ್ದು, ಅವರಿಗೆ ಠಾಣೆಗಳನ್ನು ಕೂಡ ಹಂಚಿಕೆ ಮಾಡಲಾಗಿದೆ. ಇನ್ನು 400 ಮಂದಿ ತರಬೇತಿಯಲ್ಲಿದ್ದಾರೆ.
ಜೊತೆಗೆ 8,000 ಪೊಲೀಸ್ ಕಾನ್‌ಸ್ಟೇಬಲ್‌ಗಳ ನೇಮಕಾತಿಗೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿದ್ದು, ಶೀಘ್ರವೇ ಅಧಿಸೂಚನೆ ಹೊರಡಿಸಲಾಗುವುದು. ಒಟ್ಟಾರೆ 56,000 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಬದ್ಧವಾಗಿದೆ. ಎಲ್ಲಿ ಸಿಬ್ಬಂದಿ ಅವಶ್ಯಕತೆ ಹೆಚ್ಚಿದೆಯೋ, ಅಲ್ಲಿಗೆ ತಕ್ಷಣವೇ ನೇಮಕ ಮಾಡಲಾಗುವುದು ಎಂದು ಭರವಸೆ ನೀಡಿದರು.

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.