ಶಿವಮೊಗ್ಗ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ನ್ಯಾಯಾಲಯವು ಆರೋಪಿಗೆ 20 ವರ್ಷಗಳ ಕಠಿಣ ಕಾರಾವಾಸ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.
ಶಿವಮೊಗ್ಗ : ಪ್ರಿಪೇಯ್ಡ್ ಆಟೋ ಕೌಂಟರ್ ಬುಕ್ ಮಾಡುತ್ತಿದ್ದೀರಾ? ಹಾಗಾದ್ರೆ ಈ ವಿಚಾರ ತಿಳಿದಿರಲಿ.
ಶಿರಾಳಕೊಪ್ಪ 23 ವರ್ಷದ ಯುವಕನೊಬ್ಬನು 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದನು. ಈ ಸಂಬಂಧ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಮತ್ತು ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಅಂದಿನ ಶಿಕಾರಿಪುರ ಡಿವೈಎಸ್ಪಿ ಕೇಶವ ಕೆ.ವಿ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶ್ರೀಧರ್ ಅವರು ಪ್ರಬಲ ವಾದ ಮಂಡಿಸಿದ್ದರು. ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರಾದ ನಿಂಗನಗೌಡ ಪಾಟೀಲ್ ಅವರು ಆರೋಪಿತನ ಮೇಲಿನ ದೂರು ಸಾಬೀತಾದ ಹಿನ್ನೆಲೆಯಲ್ಲಿ ಈ ಶಿಕ್ಷೆ ಪ್ರಕಟಿಸಿದ್ದಾರೆ.
ನ್ಯಾಯಾಲಯವು ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮಾತ್ರವಲ್ಲದೆ, 1,00,000 ರೂ.ಗಳ ಭಾರಿ ದಂಡವನ್ನು ವಿಧಿಸಿದೆ. ದಂಡದ ಮೊತ್ತದಲ್ಲಿ ಬಾಲಕಿಗೆ ಪರಿಹಾರ ನೀಡಲು ಸೂಚಿಸಿದೆ.
Shimoga Court Sentences Man to 20 Year jail


