ಹೆಚ್ಚುತ್ತಿದೆ ದನ ಕಳ್ಳತನದ ಹಾವಳಿ: ಪೊಲೀಸ್ ಇಲಾಖೆಯಿಂದ ಹೈ ಅಲರ್ಟ್

Police Alert ಶಿವಮೊಗ್ಗ: ಸಾಗರ ಗ್ರಾಮಾಂತರಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ಜಾನುವಾರು ಕಳ್ಳತನದ ಪ್ರಕರಣಗಳು ಸತತವಾಗಿ ವರದಿಯಾಗುತ್ತಿರುವುದರಿಂದ ಸಾರ್ವಜನಿಕರಲ್ಲಿ ಆತಂಕ ಮನೆಮಾಡಿದೆ. ಈ ಪರಿಸ್ಥಿತಿಯನ್ನು ನಿಯಂತ್ರಿಸಲು ಮುಂದಾಗಿರುವ ಸಾಗರ ಉಪವಿಭಾಗದ ಪೊಲೀಸರು ರೈತರಿಗೆ ಮತ್ತು ಜಾನುವಾರು ಮಾಲೀಕರಿಗೆ ಮಹತ್ವದ ಸುರಕ್ಷತಾ ಸೂಚನೆಗಳನ್ನು ನೀಡಿದ್ದಾರೆ. 

ಶಿವಮೊಗ್ಗ:  ಯುವಕನಿಗೆ 20 ವರ್ಷ ಜೈಲು ಶಿಕ್ಷೆ, 1 ಲಕ್ಷ ದಂಡ, ಕಾರಣವೇನು ಗೊತ್ತಾ,,?  

ಜಾನುವಾರುಗಳ ಸುರಕ್ಷತೆಯ ದೃಷ್ಟಿಯಿಂದ ರೈತರು ತಮ್ಮ ಎತ್ತು, ಆಕಳು ಮತ್ತು ಎಮ್ಮೆಗಳನ್ನು ರಾತ್ರಿ ವೇಳೆಯಲ್ಲಿ ರಸ್ತೆ ಬದಿಗಳಲ್ಲಿ ಬಿಡದೆ ಕಡ್ಡಾಯವಾಗಿ ಕೊಟ್ಟಿಗೆಗಳಲ್ಲಿ ಕಟ್ಟಿ ಹಾಕಿ ಸುರಕ್ಷಿತವಾಗಿರಿಸಬೇಕು ಎಂದು ಪೊಲೀಸರು ಕಟ್ಟುನಿಟ್ಟಾಗಿ ತಿಳಿಸಿದ್ದಾರೆ. ಗ್ರಾಮದ ಪ್ರಮುಖ ವೃತ್ತಗಳಲ್ಲಿ ಉತ್ತಮ ಗುಣಮಟ್ಟದ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿಕೊಳ್ಳುವ ಮೂಲಕ ಕಳ್ಳರ ಮೇಲೆ ನಿಗಾ ಇಡಲು ಸೂಚಿಸಲಾಗಿದೆ. ಇದಲ್ಲದೆ, ಗ್ರಾಮಗಳಲ್ಲಿ ರಾತ್ರಿ ವೇಳೆ ಸಂಶಯಾಸ್ಪದವಾಗಿ ಓಡಾಡುವ ವ್ಯಕ್ತಿಗಳು ಅಥವಾ ಅಪರಿಚಿತ ವಾಹನಗಳು ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣವೇ 112 ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡುವ ಮೂಲಕ ಸಹಕರಿಸಬೇಕು ಎಂದು ವಿನಂತಿಸಲಾಗಿದೆ. 

ವಾರಸುದಾರರಿಲ್ಲದ ಅಥವಾ ಬೀಡಾಡಿ ದನಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಬಿಟ್ಟರೆ ಅಂತಹ ಜಾನುವಾರುಗಳನ್ನು ಕಾನೂನು ರೀತ್ಯಾ ಗೋಶಾಲೆಗಳಿಗೆ ರವಾನಿಸಲಾಗುವುದು ಎಂದು ಎಚ್ಚರಿಸಿರುವ ಪೊಲೀಸರು, ಯಾವುದೇ ಕಳ್ಳತನದ ಘಟನೆ ಸಂಭವಿಸಿದಲ್ಲಿ ತಕ್ಷಣ ಠಾಣೆಗೆ ದೂರು ನೀಡಲು ತಿಳಿಸಿದ್ದಾರೆ.

ಸಾರ್ವಜನಿಕರು 9480803361 ಅಥವಾ 8197574273 ಸಂಖ್ಯೆಗಳಿಗೆ ಸಂಪರ್ಕಿಸಿ ಮಾಹಿತಿ ಹಂಚಿಕೊಳ್ಳುವ ಮೂಲಕ ಅಪರಾಧ ಮುಕ್ತ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕೆಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ಕೋರಿದೆ.

Police Alert New Rules to Stop Cattle Theft

Police Alert New Rules to Stop Cattle Theft
Police Alert New Rules to Stop Cattle Theft
shivamogga car decor sun control house
shivamogga car decor sun control house