ಶಿವಮೊಗ್ಗ: ಅಡುಗೆ ಅನಿಲ ಅಭಾವಕ್ಕೆ ಆತಂಕ ಬೇಡ; ಸಮಸ್ಯೆ ಇದ್ದಲ್ಲಿ ಈ ಹೆಲ್ಪ್​​​ಲೈನ್​ಗೆ ಫೋನ್​ ಮಾಡಿ 

Shimoga DC Update ಶಿವಮೊಗ್ಗ:ಇರಾನ್ ಮತ್ತು ಇಸ್ರೇಲ್ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ಎಲ್‌ಪಿಜಿ ಸಿಲಿಂಡರ್ ವಿತರಣೆಯಲ್ಲಿ ವ್ಯತ್ಯಯ ಉಂಟಾಗಿರುವ ಬೆನ್ನಲ್ಲೇ,ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಪ್ರಭುಲಿಂಗ ಕವಳಿಕಟ್ಟಿ ಅವರು ಸಾರ್ವಜನಿಕರಿಗೆ ಮಹತ್ವದ ಸ್ಪಷ್ಟನೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಗೃಹ ಬಳಕೆಯ ಅಡುಗೆ ಅನಿಲದ ದಾಸ್ತಾನು ಸಾಕಷ್ಟಿದ್ದು, ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಅವರು ಭರವಸೆ ನೀಡಿದ್ದಾರೆ. ಜಿಲ್ಲೆಗೆ ಪ್ರತಿನಿತ್ಯ ಸುಮಾರು 11 ಸಾವಿರ ಗೃಹ ಬಳಕೆಯ ಸಿಲಿಂಡರ್‌ಗಳ ಬೇಡಿಕೆಯಿದ್ದು, ಇದನ್ನು ಸಮರ್ಪಕವಾಗಿ ಪೂರೈಸಲು ಜಿಲ್ಲಾಡಳಿತ ಸಿದ್ದವಿದೆ ಎಂದಿದ್ದಾರೆ.

ಶಿವಮೊಗ್ಗದಲ್ಲಿ ಯೂತ್ ಬಾಕ್ಸಿಂಗ್ ಸೀರಿಸ್: ಡೇಟ್ ನೋಟ್​ ಮಾಡ್ಕೊಳ್ಳಿ

ಗೃಹ ಬಳಕೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಸರ್ಕಾರಿ ಆದೇಶದಂತೆ ವಾಣಿಜ್ಯ ಬಳಕೆಯ ಸಿಲಿಂಡರ್‌ಗಳ ಪೂರೈಕೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ. ಮುಂದಿನ ಆದೇಶ ಬರುವವರೆಗೂ ಈ ನಿರ್ಬಂಧ ಮುಂದುವರಿಯಲಿದ್ದು, ಇದರಿಂದ ಹೋಟೆಲ್‌ಗಳಿಗೆ ಸ್ವಲ್ಪ ಮಟ್ಟಿನ ತೊಂದರೆಯಾಗುವುದು ಅನಿವಾರ್ಯವಾಗಿದೆ.

ಆದರೆ ಆಸ್ಪತ್ರೆ ಮತ್ತು ವಿದ್ಯಾರ್ಥಿ ನಿಲಯಗಳಿಗೆ ಯಾವುದೇ ವ್ಯತ್ಯಯವಾಗದಂತೆ ನಿರಂತರವಾಗಿ ಸಿಲಿಂಡರ್ ಪೂರೈಸಲು ಕ್ರಮ ಕೈಗೊಳ್ಳಲಾಗಿದೆ. ಸಿಲಿಂಡರ್ ವಿತರಣೆಯನ್ನು ವ್ಯವಸ್ಥಿತವಾಗಿ ನಡೆಸಲು ಬುಕ್ಕಿಂಗ್ ನಿಯಮಗಳಲ್ಲಿ ಬದಲಾವಣೆ ತರಲಾಗಿದ್ದು, ಸಿಂಗಲ್ ಸಿಲಿಂಡರ್ ಹೊಂದಿರುವವರು 25 ದಿನಗಳ ನಂತರ ಹಾಗೂ ಡಬಲ್ ಸಿಲಿಂಡರ್ ಹೊಂದಿರುವವರು 30 ದಿನಗಳ ನಂತರವಷ್ಟೇ ಮುಂದಿನ ಬುಕ್ಕಿಂಗ್ ಮಾಡಲು ಅವಕಾಶ ಕಲ್ಪಿಸಲಾಗಿದೆ. 

ಸಿಲಿಂಡರ್ ಕೊರತೆಯ ಈ ಸಂದರ್ಭದಲ್ಲಿ ಹೋಟೆಲ್ ಮಾಲೀಕರು ಗೃಹ ಬಳಕೆಯ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ನಿಗಾ ವಹಿಸಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಅಕ್ರಮ ಬಳಕೆಯ ಮೇಲೆ ತೀವ್ರ ನಿಗಾ ಇರಿಸಲಾಗಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಜಿಲ್ಲಾಡಳಿತವು ಈಗಾಗಲೇ ಎರಡು ಸಹಾಯವಾಣಿಗಳನ್ನು ಆರಂಭಿಸಿದ್ದು, ಪೂರೈಕೆಯಲ್ಲಿ ಸಮಸ್ಯೆ ಎದುರಾದಲ್ಲಿ . 98442 14270 ಮತ್ತು 91482 67229 . ಈ ಸಂಖ್ಯೆಗಳನ್ನು ಸಂಪರ್ಕಿಸಿ ನೆರವು ಪಡೆಯಬಹುದಾಗಿದೆ.

Shimoga DC Update LPG Domestic Supply Stable

Shimoga DC Update LPG Domestic Supply Stable
Shimoga DC Update LPG Domestic Supply Stable
shivamogga car decor sun control house
shivamogga car decor sun control house