ಶಿವಮೊಗ್ಗ / ಮಲೆನಾಡು ಟುಡೆ ಸುದ್ದಿ / ನಗರದ ರಾಯಲ್ ಆರ್ಕಿಡ್ ಹೋಟೆಲ್ನಲ್ಲಿ ಚಲನಚಿತ್ರ ನಟಿ ಕಾರುಣ್ಯ ಗೌಡ ಅವರ ಒಡೆತನದ ‘ಅವಿರ’ ಉಡುಪು ಸಂಸ್ಥೆಯ ವತಿಯಿಂದ ಶಿವಮೊಗ್ಗ ಯುಗಾದಿ ಸೀರೆ ಹಬ್ಬ ಹೆಸರಿನ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಲಾಗಿದೆ. ಸೀರೆಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಇವತ್ತು ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಉದ್ಘಾಟಿಸಿದರು.

ಶಿವಮೊಗ್ಗಕ್ಕೆ ಮಣ್ಣು ಸಾಗಿಸ್ತಿದ್ದಾಗ ಮೇಲೆ ಕೆಳಗಾಗಿ ರಸ್ತೆ ಬದಿ ಬಿದ್ದ ಲಾರಿ!
ಯುಗಾದಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ನೂತನ ವಿನ್ಯಾಸದ ಹಾಗೂ ಆಕರ್ಷಕ ಉಡುಪುಗಳನ್ನು ಒದಗಿಸುವ ಉದ್ದೇಶದಿಂದ ಈ ಸೀರೆ ಹಬ್ಬವನ್ನು ಹಮ್ಮಿಕೊಳ್ಳಲಾಗಿದೆ. ಶುಕ್ರವಾರದಿಂದ ಆರಂಭವಾಗಿರುವ ಈ ಪ್ರದರ್ಶನ ಮತ್ತು ಮಾರಾಟ ಮೇಳವು ಮಾರ್ಚ್ 15 ರವರೆಗೆ ಸಾರ್ವಜನಿಕರಿಗಾಗಿ ತೆರೆದಿರಲಿದೆ. ಹಬ್ಬದ ಸಂಭ್ರಮವನ್ನು ಹೆಚ್ಚಿಸುವ ನಿಟ್ಟಿನಲ್ಲಿ ವಿವಿಧ ನಮೂನೆಯ ಸೀರೆಗಳನ್ನು ಗ್ರಾಹಕರಿಗಾಗಿ ಇಲ್ಲಿ ಪ್ರದರ್ಶನಕ್ಕೆ ಇಡಲಾಗಿದೆ.
ಕಾರುಣ್ಯ ಗೌಡ, ನಟಿ

ಆಸಕ್ತರು ರಾಯಲ್ ಆರ್ಕಿಡ್ಗೆ ಭೇಟಿ ನೀಡಿ ಯುಗಾದಿ ಹಬ್ಬದ ವಿಶೇಷ ಸೀರೆಗಳನ್ನು ವೀಕ್ಷಿಸಲು ಹಾಗೂ ಖರೀದಿಸಲು ಅವಕಾಶ ಕಲ್ಪಿಸಲಾಗಿದೆ. ಮಹಿಳೆಯರಿಗಾಗಿ ವಿಭಿನ್ನ ಹಾಗೂ ನೂತನ ವಿನ್ಯಾಸದ ಸೀರೆಗಳನ್ನು ಈ ಮೇಳದಲ್ಲಿ ಒದಗಿಸಲಾಗುತ್ತಿದ್ದು, ಮೂರು ದಿನಗಳ ಕಾಲ ಸಾರ್ವಜನಿಕರಿಗೆ ಮುಕ್ತ ಪ್ರವೇಶವಿರುತ್ತದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಮಲೆನಾಡು ಟುಡೆ ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.
