Shimoga Eidgah Maidan ಶಿವಮೊಗ್ಗ : ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿರುವ ಈದ್ಗಾ ಮೈದಾನದ ವಿಚಾರ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಮುಂಬರುವ ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಮೈದಾನದ ಸ್ವಚ್ಛತೆಗಾಗಿ ಬ್ಯಾರಿಕೇಡ್ ಅಳವಡಿಸಿರುವುದನ್ನು ವಿರೋಧಿಸಿ ಹಿಂದೂ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.
ಶಿವಮೊಗ್ಗ : ಮೇ 1ರಿಂದ ಇಂಡಿಗೋ ವಿಮಾನ ಸೇವೆ ಸ್ಥಗಿತ ಆಗುತ್ತಾ ?
ಮಾರ್ಚ್ 20 ರಂದು ರಂಜಾನ್ ಹಬ್ಬ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮೈದಾನವನ್ನು ಸಿದ್ಧಪಡಿಸಿಕೊಡುವಂತೆ ಮುಸ್ಲಿಂ ಸಂಘಟನೆಗಳು ಮಹಾನಗರ ಪಾಲಿಕೆಗೆ ಮನವಿ ಮಾಡಿದ್ದವು. ಈ ಕೋರಿಕೆಯ ಮೇರೆಗೆ ಪಾಲಿಕೆಯು ಇಂದು ಮೈದಾನದ ಸುತ್ತ ಬ್ಯಾರಿಕೇಡ್ ಹಾಕಿ ಸ್ವಚ್ಛತಾ ಕಾರ್ಯಕ್ಕೆ ಮುಂದಾಗಿತ್ತು. ಆದರೆ, ಹಬ್ಬಕ್ಕೆ ಇನ್ನೂ ಮೂರು ದಿನ ಬಾಕಿ ಇರುವಾಗಲೇ ಬ್ಯಾರಿಕೇಡ್ ಹಾಕಿರುವುದರಿಂದ ಸಾರ್ವಜನಿಕ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ ಎಂದು ಹಿಂದೂ ಪರ ಸಂಘಟನೆಗಳ ಪದಾಧಿಕಾರಿಗಳು ಸ್ಥಳಕ್ಕಾಗಮಿಸಿ ಆಕ್ಷೇಪ ವ್ಯಕ್ತಪಡಿಸಿದರು.
ಈ ಕುರಿತು ಪ್ರತಿಕ್ರಿಯಿಸಿದ ಶಿವಮೊಗ್ಗ ಎಸ್ಪಿ ನಿಖಿಲ್ ಬಿ., ಪಾರ್ಕಿಂಗ್ ಸಮಸ್ಯೆಯಾಗದಂತೆ ಪಾಲಿಕೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಯುಗಾದಿ ಹಬ್ಬದ ಕಾರಣ ಕೆಲಸಗಾರರ ಕೊರತೆ ಎದುರಾಗಬಹುದು ಎಂಬ ಮುನ್ನೆಚ್ಚರಿಕೆಯಿಂದ ಮುಂಚಿತವಾಗಿ ಸ್ವಚ್ಛತೆ ಆರಂಭಿಸಲಾಗಿದೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಮತ್ತು ಶಾಂತಿಯುತವಾಗಿ ಹಬ್ಬ ಆಚರಿಸಲು ಎಲ್ಲಾ ಮುಖಂಡರು ಸಹಕರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು
ಬಜರಂಗದಳದ ಮುಖಂಡ ರಾಜೇಶ್ ಗೌಡ ಮಾತನಾಡಿ, ವರ್ಷದಲ್ಲಿ ಕೇವಲ ಎರಡು ದಿನ ನಮಾಜ್ ಮಾಡಲು ಪಾಲಿಕೆ ಅವಕಾಶ ನೀಡಿದೆ. ಆದರೆ ಹಬ್ಬಕ್ಕೆ ನಾಲ್ಕು ದಿನ ಬಾಕಿ ಇರುವಾಗಲೇ ಬ್ಯಾರಿಕೇಡ್ ಹಾಕಿರುವುದು ಸರಿಯಲ್ಲ. ಈ ಮೈದಾನದಲ್ಲಿ ಸುಮಾರು 300 ಬೈಕ್ ಹಾಗೂ 40 ಕಾರುಗಳು ಪಾರ್ಕಿಂಗ್ ಆಗುತ್ತವೆ. ಈಗ ಜಾಗವಿಲ್ಲದೆ ಜನರು ಪರದಾಡುತ್ತಿದ್ದಾರೆ. ಪಾಲಿಕೆಯು ಕೂಡಲೇ ಬ್ಯಾರಿಕೇಡ್‌ಗಳನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿದರು.
Shimoga Eidgah Maidan Parking Controversy


