ಶಿವಮೊಗ್ಗ / ಮಲೆನಾಡು ಟುಡೆ ಸುದ್ದಿ /ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ವಿಭಾಗದ ಮುನ್ಸೂಚನೆಯ ಪ್ರಕಾರ, ಮುಂಬರುವ ಏಳು ದಿನಗಳ ಕಾಲ ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಈ ಬಗ್ಗೆ ವಿವರವಾಗಿ ತಿಳಿಯುವುದಾದರೆ, ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಮಾರ್ಚ್ 17 ರಿಂದ ಮಾರ್ಚ್ 21 ರವರೆಗೆ ಜಿಲ್ಲೆಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳು ದಟ್ಟವಾಗಿವೆ.
Shivamogga weather, rain forecast, thunderstorm, IMD, South Interior Karnataka
ಶಿವಮೊಗ್ಗ: ನಗರದಲ್ಲಿ 2 ದಿನ ವಿದ್ಯುತ್ ವ್ಯತ್ಯಯ
ಮಾರ್ಚ್ 17 ರಿಂದ 20 ರವರೆಗೆ ಅಲ್ಲಲ್ಲಿ ಗುಡುಗು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮಾರ್ಚ್ 21 ರಂದು ಹಲವೆಡೆ ಮಳೆಯಾಗುವ ನಿರೀಕ್ಷೆಯಿದೆ. ಮಾರ್ಚ್ 22 ಮತ್ತು 23 ರಂದು ಆಯ್ದ ನಿರ್ದಿಷ್ಟ ಸ್ಥಳಗಳಲ್ಲಿ ಸಣ್ಣ ಪ್ರಮಾಣಕ್ಕೆ ಮಳೆಯಾಗುವ ಸೂಚನೆ ನೀಡಲಾಗಿದೆ.

ಇನ್ನೂ ತಾಪಮಾನದ ವಿಷಯದಲ್ಲಿ ದಕ್ಷಿಣ ಒಳನಾಡಿನ ವ್ಯಾಪ್ತಿಗೆ ಬರುವ ಶಿವಮೊಗ್ಗದಲ್ಲಿ, ಮುಂದಿನ 3 ದಿನಗಳ ಕಾಲ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆಗಳಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ 5 ದಿನಗಳ ಕಾಲ ಕನಿಷ್ಠ ತಾಪಮಾನದಲ್ಲಿಯೂ ಯಾವುದೇ ಗಣನೀಯ ಬದಲಾವಣೆಗಳಿರುವುದಿಲ್ಲ ಎಂದು ಇಲಾಖೆ ತನ್ನ ಪ್ರಕಟಣೆಯಲ್ಲಿ ವಿವರಿಸಿದೆ.
ಶಿವಮೊಗ್ಗ: ಮನೆಗೆ ಕ್ಯೂರಿಂಗ್ ಮಾಡುವಾಗ ಆಕಸ್ಮಿಕವಾಗಿ ಬಿದ್ದು ಗಾರೆ ಮೇಸ್ತ್ರಿ ಸಾವು

ಮಲೆನಾಡು ಟುಡೆ ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.
