Shivamogga railway projects /ರೈಲ್ವೆ ಸುದ್ದಿ / ಮಲೆನಾಡು ಟುಡೆ ಸುದ್ದಿ / ಕೇಂದ್ರ ಸರ್ಕಾರದ ಮುಂದೆ ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದಂತೆ ಮತ್ತಷ್ಟು ರೈಲ್ವೆ ಯೋಜನೆಗಳನ್ನು ಸಂಸದ ಬಿ.ವೈ. ರಾಘವೇಂದ್ರ ಪ್ರಸ್ತಾಪಿಸಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಅವರು ಶಿವಮೊಗ್ಗ ಕ್ಷೇತ್ರದ ಪರವಾಗಿ ವಿವಿಧ ರೈಲ್ವೆ ಯೋಜನೆಗಳ ಪ್ರಸ್ತಾಪವಿಟ್ಟಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಭಾರತೀಯ ರೈಲ್ವೆ ವಿಭಾಗವು ತ್ವರಿತಗತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ ಅಂತಾ ಸದನಕ್ಕೆ ವಿವರಿಸಿದ ಬಿವೈಆರ್ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲ್ವೆ ಯೋಜನೆ,ತಾಳಗುಪ್ಪ-ಹೊನ್ನಾವರ, ಶಿವಮೊಗ್ಗ-ತೀರ್ಥಹಳ್ಳಿ-ಶೃಂಗೇರಿ-ಮಂಗಳೂರು ಹಾಗೂ ಶಿವಮೊಗ್ಗ-ಚಿಕ್ಕಮಗಳೂರು ರೈಲ್ವೆ ಮಾರ್ಗಗಳ ಅನುಷ್ಠಾನ ಮಾಡುವಂತೆ ಮನವಿ ಮಾಡಿದ್ದಾರೆ.

ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲ್ವೆ ಯೋಜನೆ /Shivamogga railway projects
ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲ್ವೆ ಯೋಜನೆಗೆ ಸಂಬಂಧಿಸಿದಂತೆ, ಶಿಕಾರಿಪುರ ಹಾಗೂ ರಾಣೆಬೆನ್ನೂರು ಮಾರ್ಗದ ನಡುವಿನ ಟೆಂಡರ್ ಪ್ರಕ್ರಿಯೆಗಳನ್ನು ತಕ್ಷಣವೇ ಪ್ರಾರಂಭಿಸಬೇಕು ಮತ್ತು ಕಾಮಗಾರಿಗೆ ವೇಗ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಕೋಟೆಗಂಗೂರು ಕೋಚಿಂಗ್ ಟರ್ಮಿನಲ್‌ನ ಎರಡನೇ ಹಂತದ ಕಾಮಗಾರಿಗೆ ಆದ್ಯತೆ
ಶಿವಮೊಗ್ಗ ನಗರವನ್ನು ಪ್ರಮುಖ ರೈಲ್ವೆ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಕೋಟೆಗಂಗೂರು ಕೋಚಿಂಗ್ ಟರ್ಮಿನಲ್‌ನ ಎರಡನೇ ಹಂತದ ಕಾಮಗಾರಿಯಾದ ಪಿಟ್ ಲೈನ್ ಮತ್ತು ಕೋಚ್ ವಾಷಿಂಗ್ ಪ್ಲಾಂಟ್ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಸಂಸದರು ಒತ್ತಾಯಿಸಿದ್ದಾರೆ.
ಬೀರೂರು-ಶಿವಮೊಗ್ಗ ರೈಲ್ವೆ ದ್ವಿಪಥ ಯೋಜನೆಗೆ ಅನುಮೋದನೆ
ಶಿವಮೊಗ್ಗ ಹಾಗೂ ಬೆಂಗಳೂರು ನಡುವಿನ ರೈಲು ಸಂಚಾರವನ್ನು ಮತ್ತಷ್ಟು ವೇಗಗೊಳಿಸುವ ನಿಟ್ಟಿನಲ್ಲಿ 63 ಕಿಲೋಮೀಟರ್ ಉದ್ದದ ಬೀರೂರು-ಶಿವಮೊಗ್ಗ ರೈಲ್ವೆ ದ್ವಿಪಥ ಯೋಜನೆಗೆ ಶೀಘ್ರವಾಗಿ ಆಡಳಿತಾತ್ಮಕ ಅನುಮೋದನೆ ನೀಡಬೇಕು ಎಂದುಅವರು ಕೋರಿದ್ದಾರೆ.
ತಾಳಗುಪ್ಪ-ಹೊನ್ನಾವರ, ಶಿವಮೊಗ್ಗ-ತೀರ್ಥಹಳ್ಳಿ-ಶೃಂಗೇರಿ-ಮಂಗಳೂರು ಮಾರ್ಗಗಳ ಅನುಷ್ಟಾನಕ್ಕೆ ಕೋರಿಕೆ
ಮಲೆನಾಡು ಮತ್ತು ಕರಾವಳಿ ಭಾಗಗಳನ್ನು ಬೆಸೆಯುವ ಹೊಸ ರೈಲ್ವೆ ಮಾರ್ಗಗಳ ಅಗತ್ಯತೆಯ ಬಗ್ಗೆಯೂ ಸಂಸದರು ದನಿ ಎತ್ತಿದ್ದಾರೆ. ಪ್ರಮುಖವಾಗಿ ತಾಳಗುಪ್ಪ-ಹೊನ್ನಾವರ, ಶಿವಮೊಗ್ಗ-ತೀರ್ಥಹಳ್ಳಿ-ಶೃಂಗೇರಿ-ಮಂಗಳೂರು ಹಾಗೂ ಶಿವಮೊಗ್ಗ-ಚಿಕ್ಕಮಗಳೂರು ರೈಲ್ವೆ ಮಾರ್ಗಗಳ ಅನುಷ್ಠಾನಕ್ಕೆ ಸಂಸದರು ಸದನದಲ್ಲಿ ಮನವಿ ಮಾಡಿದ್ದಾರೆ.
ಈ ಎಲ್ಲಾ ನೂತನ ಹಾಗೂ ಬಾಕಿ ಉಳಿದಿರುವ ರೈಲ್ವೆ ಯೋಜನೆಗಳು ಸಾಕಾರಗೊಂಡರೆ ಮಲೆನಾಡು ಭಾಗದ ಪರಿಸರ ಪ್ರವಾಸೋದ್ಯಮ, ಆಧ್ಯಾತ್ಮಿಕ ಪ್ರವಾಸೋದ್ಯಮ ಸೇರಿದಂತೆ ಸ್ಥಳೀಯ ಆರ್ಥಿಕ ವ್ಯವಸ್ಥೆಯು ಗಣನೀಯವಾಗಿ ಪ್ರಗತಿ ಹೊಂದಲಿದೆ ಅಭಿವೃದ್ಧಿ ಹೊಂದಿದ ಶಿವಮೊಗ್ಗದ ಮುಖಾಂತರ ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಾಣ ಮಾಡುವ ಗುರಿ ತಮ್ಮದಾಗಿದೆ.

ಮಲೆನಾಡು ಟುಡೆ ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.