KD Song Controversy ಇತ್ತೀಚೆಗೆ ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ನಲ್ಲಿ ಬಿಡುಗಡೆಯಾದ ಕೆಡಿ ಚಿತ್ರದ ಸಸ್ರೆ ಸೆರಗ ಹಾಡು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿದೆ. ಅದಕ್ಕೆ ಕಾರಣ ಈ ಚಿತ್ರದ ಹಾಡಿಗೆ ನಿರ್ದೇಶಕ ಪ್ರೇಮ್ ಬರೆದಿರುವ ಸಾಹಿತ್ಯ.
ಶಿವಮೊಗ್ಗ: ರೈಲ್ವೇ ಟಿಕೆಟ್ ಬುಕ್ಕಿಂಗ್ ಕೌಂಟರ್ ಸೇರಿದಂತೆ ಹಲವೆಡೆ ಬಾಂಬ್ ಸ್ಕ್ವಾಡ್ ಹಾಗೂ ಶ್ವಾನ ದಳದಿಂದ ತಪಾಸಣೆ
ಹೌದು, ಬರುವ ಏಪ್ರಿಲ್ 30ರಂದು ಧ್ರುವ ಸರ್ಜಾ ಅಭಿನಯದ ಕೆಡಿ ಚಿತ್ರ ದೇಶಾದ್ಯಂತ ಬಿಡುಗಡೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಚಿತ್ರದ ಎರಡು ಹಾಡುಗಳನ್ನು ಬಿಡುಗಡೆ ಮಾಡಲಾಗಿತ್ತು ಮತ್ತು ಆ ಎರಡೂ ಹಾಡುಗಳು ಸಖತ್ ವೈರಲ್ ಆಗಿದ್ದವು. ಇದೀಗ ಚಿತ್ರತಂಡ ಮೂರನೇ ಹಾಡನ್ನು ಬಿಡುಗಡೆ ಮಾಡಿದ್ದು, ಈ ಹಾಡು ವೈರಲ್ ಆಗುವುದರೊಂದಿಗೆ ಸಾಕಷ್ಟು ಟೀಕೆಗಳನ್ನೂ ಎದುರಿಸುತ್ತಿದೆ. ಅಷ್ಟೇ ಅಲ್ಲದೆ, ಈ ಹಾಡಿನ ಹಿಂದಿ ಅವತರಣಿಕೆಯನ್ನುಈಗಾಗಲೇ ಡಿಲೀಟ್ ಮಾಡಲಾಗಿದೆ.
ಈ ವಿರೋಧಕ್ಕೆ ಕಾರಣವಾಗಿದ್ದು ಹಾಡಿನ ಸಾಹಿತ್ಯ. ಈ ಹಾಡಿನ ಸಾಹಿತ್ಯದಲ್ಲಿ ಹೆಣ್ಣುಮಕ್ಕಳಿಗೆ ಅಗೌರವ ನೀಡುವಂತಹ ಹಾಗೂ ಕುಟುಂಬದವರೊಂದಿಗೆ ಕುಳಿತು ನೋಡಲು ಸಾಧ್ಯವಾಗದಂತಹ ಪದಗಳನ್ನು ಬಳಕೆ ಮಾಡಲಾಗಿದೆ ಎಂದು ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಮಹಿಳಾ ಆಯೋಗವು ದೂರು ದಾಖಲಿಸಿಕೊಂಡಿದೆ. ಹಾಗೆಯೇ ನಿರ್ದೇಶಕ ಪ್ರೇಮ್ ಅವರ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಜೋಗಿ’ ಚಿತ್ರದ ಬೇಡವೆನು ವರವನ್ನು ಕೊಡೆ ತಾಯೇ ಜನ್ಮವನು ಎಂಬಂತಹ ಅದ್ಭುತ ಹಾಡನ್ನು ಬರೆದಿದ್ದ ಪ್ರೇಮ್ ಅವರೇ ಈ ಹಾಡಿಗೆ ಸಾಹಿತ್ಯ ಬರೆದಿದ್ದಾರಾ ಎಂದು ಜನರು ಆಶ್ಚರ್ಯದಿಂದ ನೋಡುತ್ತಿದ್ದಾರೆ. ಅಷ್ಟೇ ಅಲ್ಲದೆ, ಈ ಹಿಂದೆ ಪ್ರೇಮ್ ಅವರ ಚಿತ್ರಗಳು ಚೆನ್ನಾಗಿಲ್ಲದಿದ್ದರೂ ಪರವಾಗಿಲ್ಲ, ಹಾಡುಗಳು ಮಾತ್ರ ಸೂಪರ್ ಹಿಟ್ ಇರುತ್ತಿದ್ದವು ಆದರೆ ಈಗ ಆ ಭರವಸೆಯೂ ಸುಳ್ಳಾಗಿದೆ ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ.
ಒಟ್ಟಾರೆಯಾಗಿ ಕನ್ನಡ ಚಿತ್ರರಂಗದ ಮಟ್ಟಿಗೆ ಈ ರೀತಿಯ ಅಶ್ಲೀಲತೆಯ ಹಾಡು ಬೇಕಿರಲಿಲ್ಲ ಎಂಬ ಮಾತು ಎಲ್ಲೆಡೆ ಕೇಳಿಬರುತ್ತಿದ್ದು, ವಿವಾದದ ಹಿನ್ನೆಲೆಯಲ್ಲಿ ಚಿತ್ರತಂಡ ಆ ಹಾಡನ್ನು ಪೂರ್ತಿಯಾಗಿ ತೆಗೆದುಹಾಕುತ್ತದೆಯೇ ಎಂದು ಕಾದು ನೋಡಬೇಕಿದೆ.
KD Song Controversy Womens Commission Files Case


