ಶಿವಮೊಗ್ಗದಲ್ಲಿ, ಬೆಂಗಳೂರು ಪಶುವೈದ್ಯೆ ಡಾ ಸಮೀಕ್ಷಾ ರೆಡ್ಡಿ ಸಾ*ವು! ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಮಹತ್ವದ ಆದೇಶ

This Article Written by / ajjimane ganesh / ಮಾರ್ಚ್ 20, 2026

Dr Sameeksha Reddy Death case investigation Forest Minister Eshwar B Khandre order a 7-day investigation into the tragic death of contract veterinary doctor Dr. Sameeksha Reddy following a hippopotamus attack at the Shivamogga zoo

Dr Sameeksha Reddy / ಮಲೆನಾಡು ಟುಡೆ ಸುದ್ದಿ / ಬೆಂಗಳೂರು / ಶಿವಮೊಗ್ಗದ ತಾವರೆಕೊಪ್ಪ ಮೃಗಾಲಯದಲ್ಲಿ ವನ್ಯಜೀವಿಯೊಂದಕ್ಕೆ ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ (Hippopotamus) ದಾಳಿಗೆ ಸಿಲುಕಿ ಯುವ ಪಶುವೈದ್ಯೆ ಮೃತಪಟ್ಟಿರುವ ಘಟನೆಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. 

ಶಿವಮೊಗ್ಗ-ಬೆಂಗಳೂರು ಇಂಡಿಗೋ ವಿಮಾನ ಸಂಚಾರ ಮೇ 1ರಿಂದ ತಾತ್ಕಾಲಿಕ ಸ್ಥಗಿತ

ಇತ್ತೀಚೆಗಷ್ಟೇ ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಡಾ ಸಮೀಕ್ಷಾ ರೆಡ್ಡಿ ಅವರು ನಿನ್ನೆ ರಾತ್ರಿ ನೀರಾನೆಗೆ ಚಿಕಿತ್ಸೆ ಒದಗಿಸುವ ಸಲುವಾಗಿ ತೆರಳಿದ್ದರು. ಈ ಸಂದರ್ಭದಲ್ಲಿ ಅವರು ನಡೆದ ನೀರಾನೆ ದಾಳಿಯಿಂದಾಗಿ ಗಾಯಗೊಂಡಿದ್ದರು. ತಕ್ಷಣವೇ ಡಾ ಸಮೀಕ್ಷಾ ರೆಡ್ಡಿ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 6.30ರ ಸುಮಾರಿಗೆ ಅವರು ಕೊನೆಯುಸಿರೆಳೆದಿದ್ದರು.

Dr Sameeksha Reddy Death case investigation Forest Minister Eshwar B Khandre order a 7-day investigation into the tragic death of contract veterinary doctor Dr. Sameeksha Reddy following a hippopotamus attack at the Shivamogga zoo
Dr Sameeksha Reddy Death case investigation Forest Minister Eshwar B Khandre order a 7-day investigation into the tragic death of contract veterinary doctor Dr. Sameeksha Reddy following a hippopotamus attack at the Shivamogga zoo

ಶಿವಮೊಗ್ಗ ಮೃಗಾಲಯದಲ್ಲಿ ನೀರಾನೆ ದಾಳಿ: ಬೆಂಗಳೂರು ಮೂಲದ ಪಶುವೈದ್ಯಾಧಿಕಾರಿ ಸಾವು !ನಡೆದಿದ್ದೇನು!

ಪಶುವೈದ್ಯೆ ಡಾ ಸಮೀಕ್ಷಾ ರೆಡ್ಡಿ ಮೃತಪಟ್ಟಿರುವ ಘಟನೆಯನ್ನು ಅತ್ಯಂತ ದುರದೃಷ್ಟಕರ ಎಂದು ಶೋಕ ವ್ಯಕ್ತಪಡಿಸಿರುವ ಸಚಿವ ಈಶ್ವರ ಬಿ ಖಂಡ್ರೆ, ಪ್ರತಿಯೊಂದು ಜೀವವೂ ಅಮೂಲ್ಯವಾದದ್ದು ಎಂದು ಹೇಳಿದ್ದಾರೆ. ಈ ಕಷ್ಟದ ಹಾಗೂ ದುಃಖದ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಮೃತ ವೈದ್ಯೆಯ ಕುಟುಂಬದ ಬೆಂಬಲಕ್ಕೆ ನಿಲ್ಲಲಿದೆ. ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ. ಅಲ್ಲದೆ, ಮೃತ ಯುವ ವೈದ್ಯೆಯ ಕುಟುಂಬಸ್ಥರಿಗೆ ನಿಯಮಾನುಸಾರವಾಗಿ ಕೂಡಲೇ ಪರಿಹಾರ ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಅಲ್ಲದೆ ಈ ಸಂಬಂಧ ತನಿಖೆಗೆ ಆದೇಶಿಸಿದ್ದಾರೆ. 

Dr Sameeksha Reddy Death case investigation Forest Minister Eshwar B Khandre order a 7-day investigation into the tragic death of contract veterinary doctor Dr. Sameeksha Reddy following a hippopotamus attack at the Shivamogga zoo
Dr Sameeksha Reddy Death case investigation Forest Minister Eshwar B Khandre order a 7-day investigation into the tragic death of contract veterinary doctor Dr. Sameeksha Reddy following a hippopotamus attack at the Shivamogga zoo

ಮೃಗಾಲಯಗಳಲ್ಲಿ ಕಾರ್ಯನಿರ್ವಹಿಸುವಾಗ ವಹಿಸಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆಯೂ ಸಚಿವರು ಕಟ್ಟುನಿಟ್ಟಿನ ಸೂಚನೆ ರವಾನಿಸಿದ್ದಾರೆ. ರಾಜ್ಯದ ಎಲ್ಲಾ ಮೃಗಾಲಯಗಳಲ್ಲಿರುವ ಪಶುವೈದ್ಯರು ಯಾವುದೇ ವನ್ಯಜೀವಿಗೆ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ಕಡ್ಡಾಯವಾಗಿ ಪ್ರಮಾಣಿತ ಕಾರ್ಯಚರಣೆ ಮಾನದಂಡಗಳನ್ನು (ಎಸ್.ಓ.ಪಿ.) ಪಾಲನೆ ಮಾಡಬೇಕು. ಜೊತೆಗೆ, ತ್ಯಾವರೆಕೊಪ್ಪ ಮೃಗಾಲಯದಲ್ಲಿ ನಡೆದಿರುವ ದುರಂತದ ಕುರಿತು ಹಿರಿಯ ಪಶುವೈದ್ಯರು ಹಾಗೂ ಅರಣ್ಯಾಧಿಕಾರಿಗಳನ್ನು ಒಳಗೊಂಡ ತಂಡದ ಮೂಲಕ ಸಮಗ್ರ ತನಿಖೆ ನಡೆಸಬೇಕು. ಹಾಗೂ, 7 ದಿನಗಳ ಒಳಗಾಗಿ ವರದಿಯನ್ನು ಸಲ್ಲಿಸಬೇಕು 

ಈಶ್ವರ ಬಿ ಖಂಡ್ರೆ,ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ 

ಮಲೆನಾಡು ಟುಡೆ ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್  Facebook whatsapp  , whatsapp chanel  instagram,  youtube,  telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ  google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ   malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್​ಗಳನ್ನು ಕ್ಲಿಕ್ ಮಾಡಿ ಓದಬಹುದು.

Dr Sameeksha Reddy Death case investigation Forest Minister Eshwar B Khandre order a 7-day investigation into the tragic death of contract veterinary doctor Dr. Sameeksha Reddy following a hippopotamus attack at the Shivamogga zoo

This Article Written by / ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯ್​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ

Dr Sameeksha Reddy death,Hippopotamus attack,Shivamogga Tyavarekoppa zoo,Veterinary doctor death,Wildlife official negligence

ಮುಂದಿನ ಸುದ್ದಿ ಒದಿ