ಶಿವಮೊಗ್ಗ: ನಗರದ ರೈಲ್ವೆ ನಿಲ್ದಾಣದ ಗೂಡ್ಸ್ ಶೆಡ್ ಬಳಿ ನಿಲ್ಲಿಸಲಾಗಿದ್ದ ಲಾರಿಯೊಂದು ಆಕಸ್ಮಿಕವಾಗಿ ಬೆಂಕಿಗಾಹುತಿಯಾಗಿದ್ದು, ಕ್ಷಣಾರ್ಧದಲ್ಲಿ ವಾಹನವು ಬೆಂಕಿಯ ಕೆನ್ನಾಲಗೆಗೆ ಸಿಲುಕಿ ಸುಟ್ಟು ಕರಕಲಾಗಿದೆ .
ಶಿವಮೊಗ್ಗದಲ್ಲಿ ಕಿಶೋರ್ ಕುಮಾರ್, ಸಿರಿ ಲವ್ ಲೆಟರ್ಸ್! ಮಿಸ್ ಮಾಡಿಕೊಳ್ಳಲೇ ಬೇಡಿ!
ಅಬಿದ್ ಎಂಬುವವರಿಗೆ ಸೇರಿದ ‘ಎಸ್ ಕೆ ಪಿ’ (SKP) ಹೆಸರಿನ ಈ ಗೂಡ್ಸ್ ಲಾರಿಯು ರೈಲ್ವೆ ಮೂಲಕ ಬಂದಿದ್ದ ಗೊಬ್ಬರವನ್ನು ಸಾಗಿಸಲು ಸಜ್ಜಾಗಿ ನಿಂತಿತ್ತು. ಇಂದು ಮುಂಜಾನೆ ಸುಮಾರು 5 ಗಂಟೆಯ ಸುಮಾರಿಗೆ ಯಾರೂ ಇಲ್ಲದ ಸಮಯದಲ್ಲಿ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿಯು ಮೊದಲು ಲಾರಿಯ ಕ್ಯಾಬಿನ್ ಭಾಗದಲ್ಲಿ ಕಾಣಿಸಿಕೊಂಡಿದೆ. ಈ ವೇಳೆ ಅಲ್ಲೇ ಇದ್ದ ಕ್ಲೀನರ್ ಕೂಡಲೇ ಎಚ್ಚೆತ್ತುಕೊಂಡು ಮಾಲೀಕರಿಗೆ ವಿಷಯ ಮುಟ್ಟಿಸಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಇಂಜಿನ್ ಅಥವಾ ಕ್ಯಾಬಿನ್ ಭಾಗದಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್ನಿಂದಲೇ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಬೆಂಕಿಯ ತೀವ್ರತೆಗೆ ಲಾರಿಯ ಮುಂಭಾಗ ಸಂಪೂರ್ಣವಾಗಿ ಹಾನಿಗೊಳಗಾಗಿದ್ದರೂ, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
Fire Accident Goods Lorry Gutted in Fire

