Shivamogga ಶಿವಮೊಗ್ಗ: ನಗರದ ಎನ್.ಟಿ ರಸ್ತೆಯ ಟೆಂಪೋ ಸ್ಟ್ಯಾಂಡ್ ಬಳಿ ಇಂದು ಎರಡು ದ್ವಿಚಕ್ರ ವಾಹನಗಳ ನಡುವೆ ಬೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಸವಾರ ತೀವ್ರವಾಗಿ ಗಾಯಗೊಂಡಿದ್ದಾರೆ.
ಶಿವಮೊಗ್ಗ : ಅಸಲಿಗೆ ಅಡಿಕೆ ರೇಟು ಕರೆಕ್ಟ್ ಆಗಿ ಎಷ್ಟಿದೆ!? ಏನಾಗ್ತಿದೆ?
ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಆರ್.ಎಂ.ಎಲ್ ನಗರದ 3ನೇ ಕ್ರಾಸ್ ನಿವಾಸಿ ಗುರುರಾಜ್ ಎಂದು ಗುರುತಿಸಲಾಗಿದೆ. ಇವರು ತಮ್ಮ ಬೈಕ್‌ನಲ್ಲಿ ಆರ್.ಎಂ.ಎಲ್ ನಗರದ ಕಡೆಗೆ ತಿರುವು ಪಡೆಯುತ್ತಿದ್ದ ಸಂದರ್ಭದಲ್ಲಿ ಎದುರಿನಿಂದ ವೇಗವಾಗಿ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕೆಳಗೆ ಬಿದ್ದ ಗುರುರಾಜ್ ಅವರ ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದರಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇನ್ನೊಂದು ಬೈಕ್ ಸವಾರ, ಹೊಳೆಹೊನ್ನೂರು ನಿವಾಸಿ ಮುರಳಿ ಎಂಬುವವರಿಗೂ ತೀವ್ರ ಗಾಯಗಳಾಗಿವೆ. ಅಪಘಾತದ ತೀವ್ರತೆಯಿಂದಾಗಿ ಅವರನ್ನು ತಕ್ಷಣವೇಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದರಿಂದ ಸದ್ಯ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಶಿವಮೊಗ್ಗದ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Shivamogga One Dead in NT Road Bike Collision


