ಶಿವಮೊಗ್ಗ / ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ತಮ್ಮ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಇಂಡಿಗೋ ಏರ್‌ಲೈನ್ಸ್‌ನ ಗ್ರೌಂಡ್ ಹ್ಯಾಂಡ್ಲಿಂಗ್ ವಿಭಾಗದ ನೌಕರರೊಬ್ಬರ (Indigo Airlines employee) ಮೇಲೆ ಅಟೆಂಪ್ಟು ಮರ್ಡರ್ ಯತ್ನ ನಡೆದಿದೆ. ಇವರನ್ನ ಅಡ್ಡಗಟ್ಟಿದ ದುಷ್ಕರ್ಮಿಗಳು ದೊಣ್ಣೇಯಿಂದ ಹಲ್ಲೆ ನಡೆಸಿದ್ದಾರೆ. ಮಾರ್ಚ್ 27ರಂದು ದೊಡ್ಡಿಬೀಳು ಹತ್ತಿರ ಈ ಘಟನೆ ನಡೆದಿದೆ. ಭದ್ರಾವತಿ ನಿವಾಸಿ ದರ್ಶನ್ ನಾಗರಾಜ ಈ ಕುರಿತು ಕಂಪ್ಲೆಂಟ್ ಕೊಟ್ಟಿದ್ದಾರೆ.

ಶಿವಮೊಗ್ಗ: ನಾರಾಯಣ ಹೆಲ್ತ್‌ನಿಂದ ಹೆಲ್ಲಿ ಕಿಡ್ಸ್ ಗೇಟ್‌ವೇ ಕಾರ್ಯಾಗಾರ, 40 ಮಕ್ಕಳಿಗೆ ಮಾತ್ರ ಅವಕಾಶ
ದರ್ಶನ್ ತಮ್ಮ ಸಹೋದ್ಯೋಗಿ ಗುರುಪ್ರಸಾದ್ ಜೊತೆ ಬೈಕ್ನಲ್ಲಿ ದೊಡ್ಡಿಬೀಳು ಮೂಲಕ ಭದ್ರಾವತಿಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಹಿಂಬಾಲಿಸಿಕೊಂಡು ಬಂದ ಮೂವರು ಅಪರಿಚಿತರು ಅವರ ವಾಹನವನ್ನು ಏಕಾಏಕಿ ಅಡ್ಡಗಟ್ಟಿದ್ದಾರೆ. ಅಲ್ಲದೆ ದರ್ಶನ್ ರನ್ನ ಅವಾಚ್ಯ ಶಬ್ದಗಳಿಂದ ನಿಂದಿಸಿ, ದೊಣ್ಣೆಯಿಂದ ತಲೆ ಹಾಗೂ ಬೆನ್ನಿಗೆ ಹೊಡೆದಿದ್ಧಾರೆ. ಕೊನೆಗೆ ಈ ರಸ್ತೆಯಲ್ಲಿ ಮತ್ತೊಮ್ಮೆ ಓಡಾಡಿದರೆ ಪ್ರಾಣ ಸಹಿತ ಬಿಡುವುದಿಲ್ಲ ಎಂದು ಜೀವಬೆದರಿಕೆ ಒಡ್ಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಮಲೆನಾಡು ಟುಡೆ ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.