ಭದ್ರಾವತಿ : ಆಂಧ್ರ ಪ್ರದೇಶ ರಿಜಿಸ್ಟರ್ ಲಾರಿ ಅಡಿ ಸಿಲುಕಿ, ತರೀಕೆರೆಯ ದಂಪತಿ ಸಾವು!

ಭದ್ರಾವತಿ / ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಎಚ್.ಕೆ.ಜಂಕ್ಷನ್ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ದಂಪತಿಯಿಬ್ಬರು ಜೋಳ ತುಂಬಿದ್ದ ಲಾರಿಯ ಚಕ್ರಕ್ಕೆ ಸಿಲುಕಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.

ತರೀಕೆರೆ ತಾಲ್ಲೂಕಿನ ಬರಗೇನಹಳ್ಳಿ ಗೌಳಿಕ್ಯಾಂಪ್ ನಿವಾಸಿ 30 ವರ್ಷದ ಬಾಬು ಹಾಗೂ ಅವರ ಪತ್ನಿ ಮೃತರು. ಹೋಟೆಲ್ ಒಂದರಲ್ಲಿ ದೈನಂದಿನ ಕೆಲಸವನ್ನು ಮುಗಿಸಿಕೊಂಡು ಪತಿ ಹಾಗೂ ಪತ್ನಿ ಇಬ್ಬರೂ ಬೈಕ್ ನಲ್ಲಿ ಊರಿಗೆ ವಾಪಸ್ ಆಗುತ್ತಿದ್ದರು. ಈ ವೇಳೆ ಘಟನೆ ಸಂಭವಿಸಿದೆ. 

HK Junction in Shivamogga
HK Junction in Shivamogga

ಶಿವಮೊಗ್ಗ : ಅಸಲಿಗೆ ಅಡಿಕೆ ರೇಟು ಕರೆಕ್ಟ್​ ಆಗಿ ಎಷ್ಟಿದೆ!? ಏನಾಗ್ತಿದೆ?

ಸ್ಥಳೀಯರ ಮಾಹಿತಿ ಪ್ರಕಾರ, ಶಿವಮೊಗ್ಗದಿಂದ ತರೀಕೆರೆ ಮಾರ್ಗವಾಗಿ ತೆರಳುತ್ತಿದ್ದ ಜೋಳ ತುಂಬಿದ್ದ ಲಾರಿಯು ಬೈಕ್​ಗೆ ಡಿಕ್ಕಿಯಾಗಿದೆ. ಪರಿಣಾಮ ಕೆಳಕ್ಕೆ ಇಬ್ಬರ ಮೇಲೂ ಲಾರಿಯ ಹಿಂದಿನ ಚಕ್ರ ಹರಿದಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರು ಸಹ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವನ್ನಪ್ಪಿದ್ದಾರೆ.

ಮಲೆನಾಡು ಟುಡೆ ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್  Facebook whatsapp  , whatsapp chanel  instagram,  youtube,  telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ  google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ   malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್​ಗಳನ್ನು ಕ್ಲಿಕ್ ಮಾಡಿ ಓದಬಹುದು.

Bhadravathi Court Sentences Man to 2 Years Jail Bhadravati news Basaveshwara Statue 25
HK Junction in Shivamogga
30-year-old Babu and his wife from Baragenahalli Gowli Camp tragically lose their lives under the wheels of a jowar-laden truck near HK Junction in Shivamogga?