Manipal Hospital / ಸಾಗರ / ಪೇಟೆಯಲ್ಲಿರುವ ಖಾಸಗಿ ಡಯಾಗ್ನೋಸ್ಟಿಕ್ ಕೇಂದ್ರವೊಂದರಲ್ಲಿ ಸ್ಟಾಫ್ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದ ಮಹಿಳೆಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಬಗ್ಗೆ ನಿನ್ನೆ ದಿನ ಭಾನುವಾರ ವರದಿಯಾಗಿದೆ. ಸೊರಬ ತಾಲೂಕು ಮೂಲದ 30 ವರ್ಷ ವಯಸ್ಸಿನ ಶ್ವೇತಾ ಎಂಬುವವರೇ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ.
ಬೆಂಕಿ ಹಚ್ಚಿಕೊಂಡ ವಿಚಾರ ಗೊತ್ತಾಗುತ್ತಲೆ ಮನೆಯವರು ಅವರನ್ನು ಸಾಗರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಸುಟ್ಟ ಗಾಯಗಳ ತೀವ್ರತೆ ಹೆಚ್ಚಿದ್ದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿತ್ತು. ತದನಂತರ ಅಲ್ಲಿನ ವೈದ್ಯರ ಸಲಹೆಯಂತೆ, ಅತ್ಯುತ್ತಮ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ

ಈ ಘಟನೆಗೆ ಕುಟುಂಬದಲ್ಲಿ ಉಂಟಾದ ಮನಸ್ತಾಪ ಹಾಗೂ ಮಾನಸಿಕ ಒತ್ತಡ ಕಾರಣ ಎನ್ನಲಾಗುತ್ತಿದೆಯಾದರೂ, ಈ ಬಗ್ಗೆ ಪೊಲೀಸರು ತನಿಖೆ ನಡೆಸಬೇಕಿದೆ. ಪ್ರಸ್ತುತ ಶ್ವೇತಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾದಲ್ಲಿ ಚಿಕಿತ್ಸೆ ಮುಂದುವರಿದಿದೆ.
ಮಲೆನಾಡು ಟುಡೆ ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.