ಶಿವಮೊಗ್ಗ: 9 ವೈದ್ಯಾಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ, ಯಾವಾಗ, ಎಲ್ಲಿ 

ಹಂಚಿಕೊಳ್ಳಿ
WhatsApp Facebook X Telegram
Kuvempu University Shivamogga malenadu toda image
Kuvempu University Shivamogga

ಶಿವಮೊಗ್ಗ: ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ವ್ಯಾಪ್ತಿಯ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 09 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ (General Duty Medical Officer) ಹುದ್ದೆಗಳಿಗೆ ನೇರ ಸಂದರ್ಶನ ಆಯೋಜಿಸಲಾಗಿದೆ. 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಎಂ.ಬಿ.ಬಿ.ಎಸ್ (MBBS) ಪದವೀಧರರಾಗಿರಬೇಕು. ಆಯ್ಕೆಯಾದ ಅರ್ಹ ಅಭ್ಯರ್ಥಿಗಳನ್ನು ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ರೋಸ್ಟರ್ ಮತ್ತು ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲಾಗುವುದು. ಆಯ್ಕೆಯಾದವರನ್ನು ಜಿಲ್ಲೆಯ ಪ್ರಮುಖ ಕೇಂದ್ರಗಳಾದ ಬ್ಯಾಕೋಡು, ತುಮರಿ, ಕಾರ್ಗಲ್, ತಾಳಗುಪ್ಪ, ತಡಗಳಲೆ, ಮೂಡಿದೋಡಿಕೊಪ್ಪ, ಚಂದ್ರಗುತ್ತಿ, ಬೆಟ್ಟಬಸವಾನಿ ಹಾಗೂ ರಿಪ್ಪನಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ನಿಯೋಜಿಸಲಾಗುವುದು.

ಸಂದರ್ಶನವು ದಿನಾಂಕ  ಏಪ್ರಿಲ್​ 01 ರಬೆಳಿಗ್ಗೆ 11:00 ರಿಂದ ಮಧ್ಯಾಹ್ನ 1:00 ಗಂಟೆಯವರೆಗೆ ಶಿವಮೊಗ್ಗದ ಬಿ.ಹೆಚ್ ರಸ್ತೆಯಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ನಡೆಯಲಿದೆ. ಒಂದು ವೇಳೆ ನಿಗದಿತ ದಿನದಂದು ಹುದ್ದೆಗಳು ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗದಿದ್ದಲ್ಲಿ, ಪ್ರತಿದಿನ ಅದೇ ಸ್ಥಳ ಮತ್ತು ಸಮಯದಲ್ಲಿ ಹುದ್ದೆಗಳು ಭರ್ತಿಯಾಗುವವರೆಗೆ ನೇರ ಸಂದರ್ಶನ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ. 

ಆಸಕ್ತ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗುವ ವೇಳೆ ತಮ್ಮ ವಿದ್ಯಾರ್ಹತೆ, ಜನ್ಮ ದಿನಾಂಕ ಹಾಗೂ ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ಮೂಲ ದಾಖಲಾತಿಗಳು, ದಾಖಲೆಗಳ ಒಂದು ಸೆಟ್ ನಕಲು ಪ್ರತಿಗಳು ಮತ್ತು ಇತ್ತೀಚಿನ ಎರಡು ಭಾವಚಿತ್ರಗಳೊಂದಿಗೆ ಹಾಜರಾಗಲು ಡಿಎಚ್‌ಓ ಡಾ. ನಟರಾಜ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-222382 ಅನ್ನು ಸಂಪರ್ಕಿಸಬಹುದಾಗಿದೆ.

Shivamogga Health Dept Recruitment 2026

Shivamogga Health Dept Recruitment 2026
Shivamogga Health Dept Recruitment 2026
car decor
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor